ಬೆಂಗಳೂರು: ತಮ್ಮ ವಿರುದ್ಧ ಮಾಡಿರುವ ಆರೋಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂಪಡೆಯಬೇಕು ಎಂದು ಆಗ್ರಹಿಸಿ ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಸೋಮವಾರ ಸಾಂಕೇತಿಕವಾಗಿ ಧರಣಿ ನಡೆಸಿದರು.
ಕೋಟ ಅವರು ಸಚಿವರಾಗಿದ್ದಾಗ ಭೋವಿ ಅಭಿವೃದ್ಧಿ ನಿಗಮ ಮತ್ತು ಗಂಗಾ ಕಲ್ಯಾಣ ಯೋಜನೆಯಲ್ಲಿ ಹಗರಣ ನಡೆದಿತ್ತು ಎಂದು ಸಿದ್ದರಾಮಯ್ಯ ಅವರು ಇತ್ತೀಚೆಗೆ ಆರೋಪಿಸಿದ್ದರು.
‘ನನ್ನ ಮೇಲೆ ಮಾಡಿರುವ ಸತ್ಯಕ್ಕೆ ದೂರವಾದ ಆರೋಪವನ್ನು ಹಿಂಪಡೆಯಬೇಕು. ಇಲ್ಲವಾದರೆ ಈ ಆರೋಪದ ತನಿಖೆಯನ್ನು ಸಿಬಿಐಗೆ ಶಿಫಾರಸು ಮಾಡಬೇಕು ಎಂದು ಮುಖ್ಯಮಂತ್ರಿಗೆ ಪತ್ರ ಬರೆದು ಮನವಿ ಮಾಡಿದ್ದೆ. ಆದರೆ, ಈ ಬಗ್ಗೆ ಮುಖ್ಯಮಂತ್ರಿಯ ಮೌನ ನನಗೆ ನೋವು ತಂದಿದೆ. ಆ ಕಾರಣಕ್ಕೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಸಾಂಕೇತಿಕವಾಗಿ ಧರಣಿ ಮಾಡಿದ್ದೇನೆ’ ಎಂದರು.
ಶಾಸಕ ಎಸ್. ಸುರೇಶ್ ಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸದಸ್ಯರಾದ ಪ್ರತಾಪ್‌ಸಿಂಹ ನಾಯಕ್, ಎನ್. ರವಿಕುಮಾರ್, ಭಾರತಿ ಶೆಟ್ಟಿ, ಶಾಂತಾರಾಮ ಸಿದ್ದಿ ಕೂಡಾ ಪ್ರತಿಭಟನೆಯಲ್ಲಿ ಜತೆಗೂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.