ADVERTISEMENT

ಭ್ರಷ್ಟಾಚಾರ ರಹಿತ ಆಡಳಿತ: ಸರ್ಕಾರಿ ನೌಕರರ ಪ್ರತಿಜ್ಞೆ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2023, 14:33 IST
Last Updated 30 ಅಕ್ಟೋಬರ್ 2023, 14:33 IST
ವಿಧಾನಸೌಧದಲ್ಲಿ ಸೋಮವಾರ ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಭ್ರಷ್ಟಾಚಾರಮುಕ್ತ ಆಡಳಿತ ನೀಡುವ ಪ್ರತಿಜ್ಞಾ ವಚನ ಸ್ವೀಕರಿಸಿದರು.
ವಿಧಾನಸೌಧದಲ್ಲಿ ಸೋಮವಾರ ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಭ್ರಷ್ಟಾಚಾರಮುಕ್ತ ಆಡಳಿತ ನೀಡುವ ಪ್ರತಿಜ್ಞಾ ವಚನ ಸ್ವೀಕರಿಸಿದರು.   

ಬೆಂಗಳೂರು: ವಿಧಾನಸೌಧದಲ್ಲಿ ಸೋಮವಾರ ನಡೆದ ಜಾಗೃತಿ ಅರಿವು ಸಪ್ತಾಹದಲ್ಲಿ ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭ್ರಷ್ಟಾಚಾರದ ವಿರುದ್ಧ ಪ್ರತಿಜ್ಞಾ ವಚನ ಬೋಧಿಸಿದರು.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯಕ್ರಮ ಆಯೋಜಿಸಿತ್ತು. ‘ಸಾರ್ವಜನಿಕರಿಂದ ಯಾವುದೇ ಹಣ ಪಡೆಯದೇ ಕೆಲಸ ಮಾಡುತ್ತಿದ್ದೇವೆ. ಭ್ರಷ್ಟಾಚಾರಕ್ಕೆ ಆಸ್ಪದ ನೀಡುವುದಿಲ್ಲ. ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು ಬದ್ಧರಾಗಿರುತ್ತೇವೆ’ ಎಂದು ಸಚಿವಾಲಯದ ನೌಕರರು ಪ್ರತಿಜ್ಞೆ ಸ್ವೀಕರಿಸಿದರು. 

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.