ಬೆಂಗಳೂರು: ಸರ್ಕಾರಿ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ವರ್ಗಾವಣೆ ಕೌನ್ಸೆಲಿಂಗ್‌ನ ಕರಡು ವೇಳಾಪಟ್ಟಿ ಸಿದ್ಧವಾಗಿದ್ದು, ಆಗಸ್ಟ್ 20ಕ್ಕೆ ಎಲ್ಲಾ ವರ್ಗಾವಣೆ ಪ್ರಕ್ರಿಯೆ ಕೊನೆಗೊಳ್ಳಲಿದೆ.
ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಈ ಕರಡು ವೇಳಾಪಟ್ಟಿ ಸಿದ್ಧವಾಗಿದ್ದು,ಹೆಚ್ಚುವರಿ ಉಪನ್ಯಾಸಕರ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದೆ. ಇದರ ಬಗ್ಗೆ ಜುಲೈ 3ರವರೆಗೆ ಆಯಾ ಜಿಲ್ಲೆಗಳ ಉಪನಿರ್ದೇಶಕರಿಗೆ ಆಕ್ಷೇಪಣೆ ಸಲ್ಲಿಸಬಹುದು.
ಜುಲೈ 5ರಂದು ಹೆಚ್ಚುವರಿ ಉಪನ್ಯಾಸಕರ ಕರಡು ಪಟ್ಟಿ ಹಾಗೂ 10ರಂದು ಅಂತಿಮ ಪಟ್ಟಿ ಪ್ರಕಟವಾಗಲಿದೆ. 15ರಿಂದ 18ರವರೆಗೆ ಹೆಚ್ಚುವರಿ ಉಪನ್ಯಾಸಕರ ವರ್ಗಾವಣೆಗೆ ಕೌನ್ಸೆಲಿಂಗ್ ನಡೆಯಲಿದೆ.
ಜುಲೈ 5ರಂದು ಕೋರಿಕೆ ವರ್ಗಾವಣೆಯ ಅಧಿಸೂಚನೆ ಹೊರಬೀಳಲಿದ್ದು, 15ರವರೆಗೆ ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಲು ಅವಕಾಶ ಇದೆ. 19 ಮತ್ತು 20ರಂದು ಅರ್ಜಿಗಳ ಪರಿಶೀಲನೆ ನಡೆಯಲಿದ್ದು, 24ರಂದು ಕರಡು ಆದ್ಯತಾ ಪಟ್ಟಿ ಪ್ರಕಟವಾಗಲಿದೆ. ಇದಕ್ಕೆ ಆಕ್ಷೇಪಣೆ ಸಲ್ಲಿಸಲು 30ರವರೆಗೆ ಅವಕಾಶ ಇದೆ. ಆಗಸ್ಟ್ 1ರಂದು ಅಂತಿಮ ಪಟ್ಟಿ ಹೊರಬೀಳಲಿದೆ. ಆಗಸ್ಟ್ 1ರಿಂದ 3ರವರೆಗೆ ಪ್ರಾಂಶುಪಾಲರ ವರ್ಗಾವಣೆಗೆ ಕೌನ್ಸೆಲಿಂಗ್ ನಡೆಯಲಿದೆ. ಆಗಸ್ಟ್ 3ರಂದು ಉಪನ್ಯಾಸಕರಿಗೆ ಪರಸ್ಪರ ವರ್ಗಾವಣೆ, 5ರಿಂದ 14ರವರೆಗೆ ಕೋರಿಕೆ ವರ್ಗಾವಣೆ ಮತ್ತು 16ರಿಂದ 20ರವರೆಗೆ ಕಡ್ಡಾಯ ವರ್ಗಾವಣೆಗೆ ಕೌನ್ಸೆಲಿಂಗ್ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.