ADVERTISEMENT

ಪರಿಷತ್‌ ಚುನಾವಣೆ: ಶೆಟ್ಟರ್‌ ಅವರಿಂದ ತೆರವಾದ ಸ್ಥಾನಕ್ಕೆ ಜುಲೈ 12ರಂದು ಮತದಾನ

​ಪ್ರಜಾವಾಣಿ ವಾರ್ತೆ
Published 18 ಜೂನ್ 2024, 9:36 IST
Last Updated 18 ಜೂನ್ 2024, 9:36 IST
ಇವಿಎಂ ( ಸಾಂದರ್ಭಿಕ ಚಿತ್ರ)
ಇವಿಎಂ ( ಸಾಂದರ್ಭಿಕ ಚಿತ್ರ)   

ಬೆಂಗಳೂರು: ಬಿಜೆಪಿ ಸಂಸದ ಜಗದೀಶ್‌ ಶೆಟ್ಟರ್‌ ಅವರ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್‌ ಸ್ಥಾನಕ್ಕೆ ಜುಲೈ 12ರಂದ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. 

ಜಗದೀಶ್‌ ಶೆಟ್ಟರ್‌ ಅವರು 2023ರಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದರು. ಈ ವೇಳೆ ಅವರನ್ನು ಕಾಂಗ್ರೆಸ್‌ ವಿಧಾನ ಪರಿಷತ್‌ ಸದಸ್ಯರನ್ನಾಗಿ ನೇಮಕ ಮಾಡಿತ್ತು. ನಂತರದ ರಾಜಕೀಯ ಬೆಳವಣಿಗೆಗಳಲ್ಲಿ ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದರು. ನಂತರ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸದ್ಯ ಅವರು ಬಿಜೆಪಿಯಿಂದ ಬೆಳಗಾವಿ ಸಂಸದರಾಗಿ ಆಯ್ಕೆಯಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಚುನಾವಣೆ ನಡೆಯುತ್ತಿದೆ. ಜುಲೈ 12ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಜುಲೈ 2 ಕೊನೆಯ ದಿನವಾಗಿದೆ. ಮತದಾನದ ದಿನವೇ ಸಂಜೆ 5 ಗಂಟೆಗೆ ಪಲಿತಾಂಶ ಬರಲಿದೆ.

ADVERTISEMENT

ಬಿಹಾರ, ಉತ್ತರಪ್ರದೇಶ, ಆಂಧ್ರಪ್ರದೇಶ ರಾಜ್ಯ ತಲಾ ಒಂದು ಸ್ಥಾನಗಳಿಗೂ ಜುಲೈ 12ರಂದು ಮತದಾನ ನಡೆಯಲಿದೆ ಎಂದು ಆಯೋಗ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.