ಬಾಗಲಕೋಟೆ: ‘ರಾಜ್ಯ ಸರ್ಕಾರ ಸುಭದ್ರವಾಗಿದೆ ಎಂದು ಬಿಜೆಪಿ ಹಗಲು ಕನಸು ಕಾಣುತ್ತಿದೆ. ಸಂಪುಟ ವಿಸ್ತರಣೆ ನಂತರ ಅದರನಿಜ ಬಣ್ಣ ಬಯಲಾಗಲಿದೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಉಪ ಚುನಾವಣೆಯಲ್ಲಿ ಆಡಳಿತ ಪಕ್ಷದ ಪರ ಜನರು ಒಲವು ತೋರುವುದು ಸಾಮಾನ್ಯ. ಸ್ಥಿರ ಸರ್ಕಾರ ಬೇಕು ಎಂಬ ಕಾರಣಕ್ಕೆ ಮತದಾರರು ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಆದರೂ ಪ್ರತಿ ಮತ ಕ್ಷೇತ್ರಕ್ಕೆ ಬಿಜೆಪಿ ₹ 100 ಕೋಟಿ ಖರ್ಚು ಮಾಡಿದೆ’ ಎಂದು ಆರೋಪಿಸಿದರು.
‘ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ರಾಜೀನಾಮೆ ಅಂಗೀಕಾರ ವಿಚಾರ ಹೈ ಕಮಾಂಡ್ ಅಂಗಳದಲ್ಲಿದೆ. ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ’ ಎಂದರು.
‘ಜಿಲ್ಲೆಯಲ್ಲಿ ಉಂಟಾದ ಪ್ರವಾಹದಿಂದ ಸಂತ್ರಸ್ತರಾದವರಿಗೆ ಮನೆ ನಿರ್ಮಿಸಿಕೊಳ್ಳಲು ಕೇವಲ ₹ 1 ಲಕ್ಷ ಪರಿಹಾರ ವಿತರಿಸಲಾಗಿದೆ. ಉಳಿದ ಪರಿಹಾರ ನೀಡುತ್ತಿಲ್ಲ.ಬೆಳೆ ಹಾನಿಗೆ ಎಷ್ಟು ಪರಿಹಾರ ನೀಡುತ್ತೇವೆ ಎಂಬುವುದನ್ನು ಇದುವರೆಗೆ ಘೋಷಿಸಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.