ಬೆಂಗಳೂರು: ‘ಕೇಂದ್ರ ಸರ್ಕಾರ ವಿವಿಧ ರಾಜ್ಯಗಳಿಗೆ ಮೇ 17ರಿಂದ ಮೇ 23ರವರೆಗಿನ ಬಳಕೆಗಾಗಿ 23 ಲಕ್ಷ ವಯಲ್ಸ್ ರೆಮ್ಡಿಸಿವಿರ್ ಚುಚ್ಚುಮದ್ದು ಹಂಚಿಕೆ ಮಾಡಿದೆ. ಅದರಲ್ಲಿ ಕರ್ನಾಟಕಕ್ಕೆ 4.25 ಲಕ್ಷ ವಯಲ್ಸ್ ನೀಡಲಾಗಿದೆ’ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.
‘ಏಪ್ರಿಲ್ 21ರಿಂದ ಇದುವರೆಗೆ ಒಟ್ಟು 76 ಲಕ್ಷ ವಯಲ್ಸ್ ರೆಮ್ಡಿಸಿವಿರ್ ಔಷಧವನ್ನು ಕೇಂದ್ರ ಸರ್ಕಾರ ವಿವಿಧ ರಾಜ್ಯಗಳಿಗೆ ಹಂಚಿಕೆ ಮಾಡಿದೆ. ಅದರಲ್ಲಿ ಕರ್ನಾಟಕಕ್ಕೆ 10 ಲಕ್ಷ ವಯಲ್ಸ್ ದೊರೆತಿದೆ. ಮಹಾರಾಷ್ಟ್ರದ (14.92 ಲಕ್ಷ) ನಂತರ ಅತಿ ಹೆಚ್ಚು ರೆಮ್ಡಿಸಿವಿರ್ ಪಡೆದ ರಾಜ್ಯ ಕರ್ನಾಟಕ. ಆದರೆ, ಈ ಬಾರಿ ಕರ್ನಾಟಕ ಎಲ್ಲ ರಾಜ್ಯಗಳಿಗಿಂತ ಹೆಚ್ಚು ರೆಮ್ಡಿಸಿವಿರ್ ಪಡೆದಿದೆ’ ಎಂದೂ ಅವರು ಹೇಳಿದ್ದಾರೆ.
‘ರಾಜ್ಯಗಳಲ್ಲಿರುವ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆಯಯನ್ನು ಆಧರಿಸಿ ಈ ಔಷಧವನ್ನು ಹಂಚಿಕೆ ಮಾಡಲಾಗುತ್ತದೆ. ಹೀಗಾಗಿ, ರಾಜ್ಯಕ್ಕೆ ಈ ಬಾರಿ ಹೆಚ್ಚಿನ ಸಂಖ್ಯೆಯ ರೆಮ್ಡಿಸಿವಿರ್ ಹಂಚಿಕೆಯಾಗಿದೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.