ಮೈಸೂರು:ಕೋವಿಡ್ ಪಾಸಿಟಿವಿಟಿ ಪ್ರಮಾಣ ತಗ್ಗಿಸಲು ಕಸರತ್ತು ನಡೆಸುತ್ತಿರುವ ಮೈಸೂರು ಜಿಲ್ಲೆಯಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ತಳಿಯ ಕೊರೊನಾ ವೈರಾಣು ಪತ್ತೆಯಾಗಿರುವ ವರದಿ ಬಂದಿದೆಎನ್ನಲಾಗಿದೆ. ಆದರೆ, ‘ಅಧಿಕೃತ ಮಾಹಿತಿ ಬಂದಿಲ್ಲ’ ಎಂಬುದಾಗಿಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಹೇಳಿದರು.
ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಎಂಎಂಸಿಆರ್‌ಐ) ವತಿಯಿಂದ ಮಾದರಿಯನ್ನು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಗೆ (ನಿಮ್ಹಾನ್ಸ್) ಕಳುಹಿಸಲಾಗಿತ್ತು.
‘ನಿಮ್ಹಾನ್ಸ್‌ಗೆ ಸುಮಾರು 40 ಮಾದರಿ ಕಳುಹಿಸಲಾಗಿದೆ. ಡೆಲ್ಟಾ ಪ್ಲಸ್ ಪತ್ತೆಯಾಗಿರುವ ಬಗ್ಗೆ ಇದುವರೆಗೆ ಅಧಿಕೃತ ಮಾಹಿತಿ ಬಂದಿಲ್ಲ. ಅಧಿಕೃತವಾಗಿ ಗೊತ್ತಾಗುವವರೆಗೆ ಈ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಯಾವುದೇ ರೀತಿಯ ವೈರಾಣುವನ್ನುಎದುರಿಸಲು ನಾವು ಸಿದ್ಧವಿದ್ದೇವೆ’ ಎಂದು ಗೌತಮ್ ತಿಳಿಸಿದರು. ಈ ಕುರಿತು ಪ್ರತಿಕ್ರಿಯಿಸಿರುವಎಂಎಂಸಿಆರ್‌ಐ ನಿರ್ದೇಶಕ ಡಾ.ಸಿ.ಪಿ.ನಂಜರಾಜ್, ‘ಒಬ್ಬ ವ್ಯಕ್ತಿಯ ಗಂಟಲು ದ್ರವ ಮಾದರಿಯಲ್ಲಿ ಡೆಲ್ಟಾಪ್ಲಸ್ ತಳಿ ಪತ್ತೆಯಾಗಿರುವುದಾಗಿ ನಿಮ್ಹಾನ್ಸ್ ಅಧಿಕಾರಿಗಳು ಹೇಳುತ್ತಿದ್ದಾರೆ. ಪರೀಕ್ಷೆಗಾಗಿ ಕಳೆದ ತಿಂಗಳು ಮಾದರಿ ಕಳುಹಿಸಿದ್ದೆವು’ ಎಂದರು.
ಒಂದು ಪ್ರಕರಣ ವರದಿಯಾಗಿರುವುದುಗೊತ್ತಾಗಿದೆ ಎಂದು ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಚ್.ಪ್ರಸಾದ್‌ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.