ಬೆಂಗಳೂರು: ಕೋವಿಡ್ ನಿರ್ವಹಣೆ ಹೆಸರಿನಲ್ಲಿ ನಡೆದ ಅವ್ಯವಹಾರಗಳ ಕುರಿತು ವಿಚಾರಣೆ ನಡೆಸಿ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿಕುನ್ಹಾ ನೇತೃತ್ವದ ಆಯೋಗ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಪರಿಶೀಲಿಸಿ, ತಪ್ಪಿತಸ್ಥರ ಮೇಲೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಿರಂತರವಾಗಿ ಮೇಲ್ವಿಚಾರಣೆ ನಡೆಸಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ.
ಸಚಿವರಾದ ಜಿ. ಪರಮೇಶ್ವರ, ಎಚ್.ಕೆ. ಪಾಟೀಲ, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಸಂತೋಷ್ ಎಸ್. ಲಾಡ್, ಶರಣ ಪ್ರಕಾಶ್ ಪಾಟೀಲ ಸಮಿತಿಯ ಸದಸ್ಯರು. ಸಂಪುಟ ಸಮಿತಿ ರಚಿಸಿದ ಕುರಿತು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟಿಪ್ಪಣಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.