ADVERTISEMENT

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಕೋವಿಡ್‌ ಲಸಿಕೆ: ಸಚಿವ ಸುಧಾಕರ್‌

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2021, 0:37 IST
Last Updated 5 ಮಾರ್ಚ್ 2021, 0:37 IST
ಡಾ.ಕೆ. ಸುಧಾಕರ್
ಡಾ.ಕೆ. ಸುಧಾಕರ್   

ಬೆಂಗಳೂರು: ಮುಂದಿನ ದಿನಗಳಲ್ಲಿ ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳು (ಪಿಎಚ್‌ಸಿ) ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲೂ (ಸಿಎಚ್‌ಸಿ) ಕೋವಿಡ್‌ ಲಸಿಕೆ ಹಾಕಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದರು.

ಪತ್ರಕರ್ತರ ಜತೆ ಗುರುವಾರ ಮಾತನಾಡಿದ ಅವರು, ‘ಈಗ ತಾಲ್ಲೂಕು ಆಸ್ಪತ್ರೆಗಳಲ್ಲಿ ಮಾತ್ರ ಲಸಿಕೆ ಹಾಕಲಾಗುತ್ತಿದೆ. ಹೆಚ್ಚು ಜನರು ಲಸಿಕೆ ಪಡೆಯಲು ಅನುಕೂಲವಾಗುವಂತೆ, ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿರುವ ಸೌಲಭ್ಯಗಳ ಆಧಾರದಲ್ಲಿ ಕೋವಿಡ್‌ ಪಿಎಚ್‌ಸಿ ಮತ್ತು ಸಿಎಚ್‌ಸಿಗಳಲ್ಲೂ ಕೋವಿಡ್‌ ಲಸಿಕೆ ವಿತರಣೆಗೆ ವ್ಯವಸ್ಥೆ ಮಾಡಲಾಗುವುದು’ ಎಂದರು.

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಲಸಿಕೆ ವಿತರಣೆ ನಡೆಯಲಿದೆ. ಖಾಸಗಿ ಆರೋಗ್ಯ ಕೇಂದ್ರಗಳಿಗೂ ಲಸಿಕೆ ವಿತರಣೆಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.