ADVERTISEMENT

ಮತ್ತೆ ಕೋವಿಡ್‌ ಭೀತಿ: ಇಂದು ಸಿಎಂ ನೇತೃತ್ವದಲ್ಲಿ ತುರ್ತು ಸಭೆ –ಸಚಿವ ಸುಧಾಕರ್ 

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಡಿಸೆಂಬರ್ 2022, 5:51 IST
Last Updated 22 ಡಿಸೆಂಬರ್ 2022, 5:51 IST
ಡಾ.ಕೆ.ಸುಧಾಕರ್
ಡಾ.ಕೆ.ಸುಧಾಕರ್   

ಬೆಂಗಳೂರು: ದೇಶದಲ್ಲಿ ಕೊರೊನಾ ರೂಪಾಂತರಿ ತಳಿಯ ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ತುರ್ತು ಸಭೆ ಕರೆಯಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದರ ಅವರು, ‘ಇಂದು ಸಿಎಂ ನೇತೃತ್ವದಲ್ಲಿ ತುರ್ತು ಸಭೆ ಕರೆದಿದ್ದೇವೆ. ಜತೆಗೆ, ಪ್ರಧಾನಿ ಮೋದಿ ಅವರು ಎಲ್ಲಾ ರಾಜ್ಯಗಳ ಆರೋಗ್ಯ ಅಧಿಕಾರಿಗಳು ಮತ್ತು ತಾಂತ್ರಿಕ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಲಿದ್ದಾರೆ’ ಎಂದು ಹೇಳಿದ್ದಾರೆ.

ಮೋದಿಯವರ ನಿರ್ದೇಶನಗಳ ಆಧಾರದ ಮೇಲೆ ರಾಜ್ಯ ಸರ್ಕಾರವು ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸುತ್ತದೆ ಎಂದು ಸುಧಾಕರ್ ತಿಳಿಸಿದ್ದಾರೆ.

ADVERTISEMENT

ಅಧಿಕಾರಿಗಳೊಂದಿಗೆ ಮೋದಿ ಸಭೆ:ಕೊರೊನಾ ರೂಪಾಂತರಿ ಓಮೈಕ್ರಾನ್‌ನ ಉಪತಳಿ ಬಿಎಫ್‌.7 ಸೋಂಕಿನ ನಾಲ್ಕು ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಬಿಎಫ್‌.7 ಸೋಂಕಿನ ನಾಲ್ಕು ಪ್ರಕರಣಗಳು ಗುಜರಾತ್‌ ಹಾಗೂ ಒಡಿಶಾದಲ್ಲಿ ತಲಾ ಎರಡೆರಡು ಪ್ರಕರಣಗಳು ದೃಢಪಟ್ಟಿವೆ.

ದೇಶದಲ್ಲಿ ಕೊರೊನಾ ವೈರಸ್‌ ಓಮೈಕ್ರಾನ್‌ನ ಉಪತಳಿ ಬಿಎಫ್‌.7 ಸೋಂಕಿನ ನಾಲ್ಕು ಪ್ರಕರಣಗಳು ಜುಲೈ, ಸೆಪ್ಟೆಂಬರ್ ಮತ್ತು ನವೆಂಬರ್‌ನಲ್ಲಿ ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.