ADVERTISEMENT

ಡಿಕೆಶಿ ಮನೆಯಲ್ಲಿ ಸಿ.ಪಿ. ಯೋಗೇಶ್ವರ್ ಪ್ರತ್ಯಕ್ಷ: 'ಕೈ' ಹಿಡಿಯುವುದು ನಿಶ್ಚಿತ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2024, 4:18 IST
Last Updated 23 ಅಕ್ಟೋಬರ್ 2024, 4:18 IST
ಸಿ.ಪಿ. ಯೋಗೇಶ್ವರ್
ಸಿ.ಪಿ. ಯೋಗೇಶ್ವರ್   

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿಜೆಪಿಯ ಸಿ.ಪಿ‌. ಯೋಗೇಶ್ವರ್ ಅವರು ಬುಧವಾರ ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿ ಕಾಣಿಸಿಕೊಂಡಿದ್ದಾರೆ.

ಆ ಮೂಲಕ, ಯೋಗೇಶ್ವರ್ ಅವರು ಬಿಜೆಪಿ ಬಿಟ್ಟು 'ಕೈ' ಹಿಡಿಯುವುದು ಖಚಿತವಾಗಿದೆ.

ಚನ್ನಪಟ್ಟಣ ಕ್ಷೇತ್ರದಿಂದ ಯೋಗೇಶ್ವರ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ADVERTISEMENT

ಶಿವಕುಮಾರ್ ಆವರು ತಮ್ಮ ಕಾರಿನಲ್ಲಿ ಯೋಗೇಶ್ವರ್ ಅವರನ್ನು ಕರೆದುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿದ್ದಾರೆ. ಆ ಬಳಿಕ ಯೋಗೇಶ್ವರ್ ಅವರ ಕಾಂಗ್ರೆಸ್ ಸೇರ್ಪಡೆ ಘೋಷಣೆಯಾಗುವ ಸಾಧ್ಯತೆಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.