ADVERTISEMENT

ದೌರ್ಜನ್ಯದ ಗ್ರಾಮ ವಾಸ್ತವ್ಯ: ಬಿ.ಎಸ್.ಯಡಿಯೂರಪ್ಪ ಟೀಕೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2019, 20:10 IST
Last Updated 26 ಜೂನ್ 2019, 20:10 IST
ಬಿ.ಎಸ್‌.ಯಡಿಯೂರಪ್ಪ
ಬಿ.ಎಸ್‌.ಯಡಿಯೂರಪ್ಪ   

ಬೆಂಗಳೂರು: ‘ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ದೌರ್ಜನ್ಯದಿಂದ ಕೂಡಿದ ಗ್ರಾಮ ವಾಸ್ತವ್ಯವನ್ನು ನಡೆಸುತ್ತಿದ್ದು, ಇದನ್ನು ಜನತೆ ಸಹಿಸುವುದಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

‘ಈ ರೀತಿ ಜನರ ಮೇಲೆ ಮಾನಸಿಕ ದೌರ್ಜನ್ಯ ಮುಂದುವರಿಸಿದರೆ ಬಿಜೆಪಿ ಸಹಿಸುವುದಿಲ್ಲ.ರಾಜ್ಯದಲ್ಲಿ ಬಿಜೆಪಿ ಅಧಿಕ ಸ್ಥಾನಗಳನ್ನು ಗೆದ್ದ ಕಾರಣ ಮುಖ್ಯಮಂತ್ರಿ ಸಂಯಮ ಕಳೆದುಕೊಳ್ಳುತ್ತಿರುವುದು ಅವರ ಕೊಳಕು ಮನಸ್ಸನ್ನು ಎತ್ತಿ ತೋರಿಸುತ್ತದೆ’ ಎಂದು ಯಡಿಯೂರಪ್ಪ ಹೇಳಿದ್ದಾರೆ.

‘ಬಿಜೆಪಿ ಮತ್ತು ಮೋದಿಗೆ ಜನತೆ ಮತ ಹಾಕಿದರು ಎಂಬ ಕಾರಣಕ್ಕೆ ಹೀಯಾಳಿಸಿ ಮಾತನಾಡುವುದು ಮುಖ್ಯಮಂತ್ರಿಗೆ ಸ್ಥಾನಕ್ಕೆ ಮಾಡಿದ ಅವಮಾನ. ಹಳ್ಳಿಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಜನರ ಭಾವನೆಗಳನ್ನು ಹತ್ತಿಕ್ಕಿ ಗ್ರಾಮ ವಾಸ್ತವ್ಯ ಮಾಡು
ತ್ತಿರುವುದು ಪ್ರಜಾಪ್ರಭುತ್ವ ವಿರೋಧಿ ಮತ್ತು ಜನ ವಿರೋಧಿ ಕ್ರಮ’ ಎಂದು ಅವರು ತಿಳಿಸಿದರು.

ADVERTISEMENT

ಬಂಧನ ಖಂಡನೆ: ಶಾಸಕ ಶಿವನಗೌಡ ನಾಯಕ್‌ ಅವರ ಬಂಧನವನ್ನು ಬಿಜೆಪಿ ಪ್ರಧಾನಕಾರ್ಯದರ್ಶಿ ಎನ್‌.ರವಿಕುಮಾರ್‌ ಖಂಡಿಸಿದ್ದಾರೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪಾಳೇಗಾರಿಕೆ ಸಂಸ್ಕೃತಿ ಮೆರೆದಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.