ADVERTISEMENT

ಸಿಎಸ್‌ಆರ್‌ ನಿಧಿ: ರಾಜ್ಯದಲ್ಲೇ ಬಳಕೆಗೆ ಕ್ರಮ

​ಪ್ರಜಾವಾಣಿ ವಾರ್ತೆ
Published 20 ಜೂನ್ 2024, 16:00 IST
Last Updated 20 ಜೂನ್ 2024, 16:00 IST
<div class="paragraphs"><p>ಡಿ.ಕೆ. ಶಿವಕುಮಾರ್</p></div>

ಡಿ.ಕೆ. ಶಿವಕುಮಾರ್

   

ಬೆಂಗಳೂರು: ಕಾರ್ಪೊರೇಟ್‌ ಕಂಪನಿಗಳು ನೀಡುವ ಸಿಎಸ್‌ಆರ್‌ ನಿಧಿ ಬಳಸಿಕೊಂಡು ಖಾಸಗಿ ಸಹಭಾಗಿತ್ವದಲ್ಲಿ ಪಬ್ಲಿಕ್‌ ಶಾಲೆಗಳ ಸಂಖ್ಯೆ ಹೆಚ್ಚಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ವಿಧಾನ ಸೌಧದಲ್ಲಿ ಗುರುವಾರ ನಡೆದ ವಿವಿಧ ಇಲಾಖೆಗಳ ಸಚಿವರು, ಅಧಿಕಾರಿಗಳನ್ನು ಒಳಗೊಂಡ ಸಭೆಯಲ್ಲಿ ಮಾತನಾಡಿದ ಅವರು, ಕೆಲ ಕಂಪನಿಗಳು ಆರಂಭದಲ್ಲಿ ಸರ್ಕಾರದಿಂದ ಪ್ರೋತ್ಸಾಹ ಧನ ಪಡೆದು, ಈಗ ಲಾಭದಾಯಕ ಸ್ಥಿತಿಯಲ್ಲಿವೆ. ಅಂತಹ ಎಲ್ಲ ಕಾರ್ಪೊರೇಟ್‌ ಕಂಪನಿಗಳಿಂದ ಸಿಎಸ್‌ಆರ್‌ ನಿಧಿ ಪಡೆದು ಶಾಲೆಗಳ ಅಭೀವೃದ್ಧಿಗೆ ಬಳಸಿಕೊಳ್ಳಬೇಕು ಎಂದರು.

ADVERTISEMENT

ರಾಜ್ಯದಲ್ಲಿ ಹಲವು ಕೈಗಾರಿಕೆಗಳು, ಕಂಪನಿಗಳಿಗೆ ನೆಲ, ಜಲ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡಲಾಗಿದೆ. ಆದರೆ, ಬಹುತೇಕ ಕಂಪನಿಗಳು ಸಿಎಸ್‌ಆರ್ ನಿಧಿಯನ್ನು ಹೊರ ರಾಜ್ಯಗಳಿಗೆ ನೀಡುತ್ತಿವೆ. ಅಂತಹ ಕಂಪನಿಗಳ ಮುಖ್ಯಸ್ಥರ ಜೊತೆ ಮಾತನಾಡಬೇಕು. ಕೈಗಾರಿಕೆ, ಗ್ರಾಮೀಣಾಭಿವೃದ್ಧಿ, ಶಿಕ್ಷಣ ಸಚಿವರು ಸಮನ್ವಯದಿಂದ ಕೆಲಸ ಮಾಡಬೇಕು. ಗ್ರಾಮೀಣ ಭಾಗದಲ್ಲಿ ಯಾವ ಭಾಗದಲ್ಲಿ, ಎಷ್ಟು ಪಬ್ಲಿಕ್‌ ಶಾಲೆಗಳ ಅಗತ್ಯವಿದೆ ಎನ್ನುವ ಕುರಿತು ಪಟ್ಟಿ ಸಿದ್ಧಪಡಿಸಬೇಕು ಎಂದು ಸೂಚಿಸಿದರು.

ಸಚಿವರಾದ ಎಂ.ಬಿ. ಪಾಟೀಲ, ಪ್ರಿಯಾಂಕ್ ಖರ್ಗೆ, ಎಂ.ಸಿ. ಸುಧಾಕರ್, ಮಧು ಬಂಗಾರಪ್ಪ, ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್‌.ಕೆ. ಅತೀಕ್‌ ಅಹ್ಮದ್, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್‌ ಕುಮಾರ್‌ ಸಿಂಗ್, ಆಯುಕ್ತೆ ಬಿ.ಬಿ. ಕಾವೇರಿ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಉಪ ಮುಖ್ಯಮಂತ್ರಿ ಕಾರ್ಯದರ್ಶಿ ರಾಜೇಂದ್ರ ಚೋಳನ್‌ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.