ಬೆಂಗಳೂರು:ಐಸಿಸ್ ಮಾದರಿಯ ಉಗ್ರಗಾಮಿಗಳನ್ನ ಬೆಂಬಲಿಸಿದ, ದೇಶದ ಒಳಗೆ ಅಭದ್ರತೆ, ಅಂತರ್ಯುದ್ಧದ, ದೇಶದ್ರೋಹದ ಸಂಚನ್ನು ಮಾಡುತ್ತಿದ್ದ ಪಿ ಎಫ್ ಐ ಹಾಗು ಅದರ ಸಹ ಸಂಘಟನೆಗಳನ್ನು ನಿಷೇಧಿಸಿದ ಕೇಂದ್ರ ಸರಕಾರದ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.
ಸರಕಾರ ಈ ಸಂಘಟನೆಗಳನ್ನು ಬ್ಯಾನ್ ಮಾಡಿದೆ, ಇಷ್ಟು ಸಾಕಾಗುವುದಿಲ್ಲ. ಸಮಾಜವು ಆನಿಟ್ಟಿನಲ್ಲಿ ಚಿಂತನೆ ನಡೆಸಬೇಕಾಗಿದೆ.ವಿದ್ರೋಹಿ ಹಾಗು ವಿಚ್ಛಿದ್ರಕಾರಿ ಮನಸ್ಥಿತಿಯ ಸಂಘಟನೆಗಳು ಸಮಾಜ ಒಳಗಡೆ ರೂಪುಗೊಳ್ಳದಂತೆ ಎಚ್ಚರಿಕೆ ವಹಿಸಬೇಕಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಷೇಧದ ಸುತ್ತ ಯಾವ ರಾಜಕೀಯ ಪಕ್ಷವೂ ತುಷ್ಟಿಕರಣದ ಮತ್ತು ತಕ್ಷಣದ ರಾಜಕೀಯ ಲಾಭ ಪಡೆದುಕೊಳ್ಳುವ ದೃಷ್ಟಿಯ ರಾಜಕಾರಣ ಮಾಡಬಾರದು ಎಂದಿದ್ದಾರೆ.ರಾಜಕೀಯವಾಗಿ ನಿಮಗೆ ಲಾಭ ಕೊಟ್ಟರು, ದೇಶದ ಭವಿಷ್ಯದ ದೃಷ್ಟಿಯಿಂದ, ಸಮಾಜವನ್ನು ಈ ದುಷ್ಟ ಶಕ್ತಿಗಳ ಕೈಯಿಂದ ಬಿಡಿಸುವ ಕಾರ್ಯದಲ್ಲಿ ತೊಡಕಾಗಲಿದೆ ಎಂದಿದ್ದಾರೆ.
ದೇಶದ ಭದ್ರತೆಯ, ಸಮಾಜದ ಗೌರವ ಕಾಪಾಡುವ ನಿಟ್ಟಿನಲ್ಲಿ, ದೇಶಪ್ರೇಮಿ ಮುಸ್ಲಿಮರು ಯೋಚನೆ ಮಾಡಬೇಕಾದ ಅಗತ್ಯ ಮತ್ತು ರಾಷ್ಟ್ರ ವಿರೋಧಿ ಹಾಗು ಮತಾಂಧತೆಯ ವಿರುದ್ಧ ಅರಿವು ಮೂಡಿಸಬೇಕಾಗಿದೆ ಎಂದಿದ್ದಾರೆ.
ನಿಷೇಧದ ನಂತರ ಪಿ ಎಫ್ ಐ ಸಂಘಟನೆಗೆ ಸೇರಿದ ದುಷ್ಟ ಶಕ್ತಿಗಳು ಭೂಗತರಾಗಿ ಕಾರ್ಯನಿರ್ವಹಿಸುವ, ಸಮಾಜವನ್ನು. ಪ್ರಚೋದಿಸುವ, ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇದ್ದು, ಇಂತಹ ಯಾವುದೇ ಘಟನೆಗಳು ಗಮನಕ್ಕೆ ಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಮುಂದಾಗುವ ಸಮಸ್ಯೆಗಳನ್ನು ತಪ್ಪಿಸಲು ಕಾನೂನಿನ ಜೊತೆ ಕೈ ಜೋಡಿಸಲು ಮನವಿ ಮಾಡುತ್ತೇನೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.