ADVERTISEMENT

ಕಬ್ಬನ್ ಪಾರ್ಕ್‌ನಲ್ಲಿ ಕಟ್ಟಡಕ್ಕೆ ಅನುಮೋದನೆ ನೀಡಿಲ್ಲ

ಮುಖ್ಯಮಂತ್ರಿ ಕಚೇರಿ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2019, 20:20 IST
Last Updated 5 ನವೆಂಬರ್ 2019, 20:20 IST

ಬೆಂಗಳೂರು: ಕಬ್ಬನ್ ಪಾರ್ಕ್‌ ಆವರಣದಲ್ಲಿ ಹೊಸ ಕಟ್ಟಡ ನಿರ್ಮಿಸುವ ಕುರಿತು ಕಟ್ಟಡ ನಕ್ಷೆ ಹಾಗೂ ನಿರ್ಮಾಣದ ಬಗ್ಗೆ ವಿವಿಧ ಕಾಯ್ದೆಗಳಡಿ ಪರಿಶೀಲನೆ ನಡೆಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಚಿವಾಲಯ ಸ್ಪಷ್ಟನೆ ನೀಡಿದೆ.

ಕಬ್ಬನ್‌ ಪಾರ್ಕ್‌ನಲ್ಲಿರುವ ಚುನಾವಣಾಧಿಕಾರಿಗಳ ಹಳೆಯ ಕಟ್ಟಡವನ್ನು ಕೆಡವಿ ಹೊಸ ಕಟ್ಟಡ ನಿರ್ಮಿಸುವ ಸಂಬಂಧ ಕಟ್ಟಡದ ನಕ್ಷೆ ಅಂತಿಮಗೊಂಡಿಲ್ಲ ಹಾಗೂ ಸಂಬಂಧ ಪಟ್ಟ ಪ್ರಾಧಿಕಾರಕ್ಕೆ ಸಲ್ಲಿಕೆಯೂ ಆಗಿಲ್ಲ. ಕಟ್ಟಡದ ನಕ್ಷೆಗೆ ಅನುಮತಿ ಕೋರಿದ ಪ್ರಸ್ತಾವನೆಯು ಬಿಬಿಎಂಪಿಗೆ ಸಲ್ಲಿಕೆಯಾಗಿಲ್ಲ ಎಂದು ಸ್ಪಷ್ಟನೆ ವಿವರಿಸಿದೆ.

ಕರ್ನಾಟಕ ಹೈಕೋರ್ಟ್‌ನ ವಿವಿಧ ಕಚೇರಿಗಳಿಗೆ ಸ್ಥಳಾವಕಾಶ ಒದಗಿಸುವ ಉದ್ದೇಶದಿಂದ ಹೊಸ ಕಟ್ಟಡ ಕಟ್ಟಲು ಹೈಕೋರ್ಟ್‌ ಅನುಮತಿ ನೀಡಿತ್ತು. ಅಲ್ಲಿರುವ ಮರಗಳನ್ನು ಕಡಿಯದೇ, ಯಾವುದೇ ಖಾಲಿ ಜಾಗವನ್ನು ಹೆಚ್ಚುವರಿಯಾಗಿ ಬಳಸದೇ ಸಮೀಪದಲ್ಲಿರುವ ಬಿಎಸ್‌ಎನ್‌ಎಲ್‌ ಹಾಗೂ ಜಿಪಿಒ ಕಚೇರಿಗಳಷ್ಟು ಎತ್ತರದಲ್ಲಿ ಕಟ್ಟಡ ನಿರ್ಮಿಸಲು ನಕ್ಷೆ ತಯಾರಿಸಲಾಗಿದೆ. ಅದನ್ನು ಅನುಮೋದನೆಗೆ ಸಲ್ಲಿಸಿಲ್ಲ ಎಂದು ಪ್ರಕಟಣೆ ಹೇಳಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.