ನವದೆಹಲಿ: ಕರ್ನಾಟಕ ಸರ್ಕಾರವು ತಮಿಳುನಾಡಿಗೆ ನವೆಂಬರ್ 1ರಿಂದ 15ರ ವರೆಗೆ ಪ್ರತಿದಿನ 2,600 ಕ್ಯೂಸೆಕ್ ಕಾವೇರಿ ನೀರನ್ನು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ. ಸಮಿತಿಯ ಶಿಫಾರಸಿನಿಂದ ರಾಜ್ಯಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ.
ದೆಹಲಿಯಲ್ಲಿ ಇಂದು (ಸೋಮವಾರ) ನಡೆದ ಸಮಿತಿಯ ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ಜಲಸಂಪನ್ಮೂಲ ಇಲಾಖೆಗಳ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಈ ಹಿಂದೆ ಅಕ್ಟೋಬರ್ 15ರಿಂದ 31ರ ವರೆಗೆ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಪ್ರಾಧಿಕಾರ ಆದೇಶ ಹೊರಡಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.