ADVERTISEMENT

Video| ದಕ್ಷಿಣ ಕನ್ನಡ: ಬಾವಿಗೆ ಬಿದ್ದ ಚಿರತೆಯನ್ನು ರಕ್ಷಿಸಿದ ಪಶುವೈದ್ಯೆ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2023, 14:49 IST
Last Updated 13 ಫೆಬ್ರುವರಿ 2023, 14:49 IST

ದಕ್ಷಿಣ ಕನ್ನಡ ಜಿಲ್ಲೆಯ ನಿಡ್ಡೋಡಿ ಗ್ರಾಮದಲ್ಲಿ ಬಾವಿಗೆ ಬಿದ್ದ ಚಿರತೆಯನ್ನು ಪಶುವೈದ್ಯರ ತಂಡವು ರಕ್ಷಿಸಿದೆ. ಚಿರತೆ ಶನಿವಾರ ಬಾವಿಗೆ ಬಿದ್ದಿತ್ತು. ಚಿರತೆ ರಕ್ಷಣಾ ಕಾರ್ಯಕ್ಕೆ ವನ್ಯಜೀವಿ ರಕ್ಷಣಾ ಕಾರ್ಯದಲ್ಲಿ ಪಳಗಿರುವ ಪಶುವೈದ್ಯರ ಮೊರೆ ಹೋಗಲಾಗಿತ್ತು. ಕೊನೆಗೆ, ಪಶುವೈದ್ಯೆ ಡಾ. ಮೇಘನಾ ಅವರನ್ನು ಬೋನಿನಲ್ಲಿ ಕೂರಿಸಿ, ಬಾವಿಯೊಳಗೆ ಇಳಿಸಿ, ಅಲ್ಲೇ ಅವರು ಚಿರತೆಗೆ ಅರಿವಳಿಕೆ ಮದ್ದು ನೀಡಿ ರಕ್ಷಿಸಿದರು. ರಕ್ಷಣೆ ಮಾಡಿದ ಚಿರತೆಯು ಸುಮಾರು ಒಂದು ವರ್ಷ ಪ್ರಾಯದ್ದು. ಅದನ್ನು ಸುರಕ್ಷಿತ ವಾಗಿ ಮತ್ತೆ ಕಾಡಿಗೆ ಬಿಡಲಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT