ADVERTISEMENT

ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ ವಿರುದ್ಧ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 15 ಜೂನ್ 2020, 10:52 IST
Last Updated 15 ಜೂನ್ 2020, 10:52 IST
ಪಿ.ಟಿ.ಪರಮೇಶ್ವರ ನಾಯ್ಕ
ಪಿ.ಟಿ.ಪರಮೇಶ್ವರ ನಾಯ್ಕ   

ಹೊಸಪೇಟೆ: ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ ಲಕ್ಷ್ಮೀಪುರದಲ್ಲಿ ಹೂವಿನಹಡಗಲಿ ಶಾಸಕ‌ ಪಿ.ಟಿ.ಪರಮೇಶ್ವರ ನಾಯ್ಕ ಅವರ ಪುತ್ರನ ಮದುವೆಯಲ್ಲಿ ಕೋವಿಡ್ ಎಸ್ಒಪಿ ನಿಯಮಗಳ ಉಲ್ಲಂಘಿಸಿರುವುದರಿಂದ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

50ಕ್ಕಿಂತ ಹೆಚ್ಚು ಜನರು ಮದುವೆಯಲ್ಲಿ ಪಾಲ್ಗೊಳ್ಳಬಾರದು ಎಂಬ ಎಸ್ಒಪಿ ನಿಯಮವನ್ನು ಅವರು ಉಲ್ಲಂಘಿಸಿದ್ದಾರೆ.

ಇದಕ್ಕೂ ಮುನ್ನ ದಾವಣಗೆರೆಯಲ್ಲಿ ಮಾತನಾಡಿದ್ದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು, ಪರಮೇಶ್ವರ ನಾಯ್ಕ ಅವರ ಮಗನ ಮದುವೆಯಲ್ಲಿ ನಿಯಮ ಉಲ್ಲಂಘನೆ ಆಗಿದೆಯೇ ಇಲ್ಲವೇ ಎಂಬುದನ್ನು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಮನಿಸಿರುತ್ತಾರೆ. ಉಲ್ಲಂಘನೆ ಆಗಿದ್ದರೆ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದ್ದರು.

ADVERTISEMENT

ಹರಪನಹಳ್ಳಿ ತಾಲ್ಲೂಕಿನ ಲಕ್ಮೀಪುರದಲ್ಲಿ ಸೋಮವಾರ ನಡೆದ ಮದುವೆಯಲ್ಲಿ 10ಕ್ಕೂ ಹೆಚ್ಚು ಸಚಿವರು ಭಾಗವಹಿಸಿದ್ದರು. ಕೋವಿಡ್ ನಿಯಮ ಉಲ್ಲಂಘನೆ ಆಗಿತ್ತು. ಈ ಬಗ್ಗೆ ದಾವಣಗೆರೆಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಸಚಿವರು ಉತ್ತರಿಸಿದ್ದರು.

ಪರಮೇಶ್ವರ ನಾಯ್ಕ ನನಗೂ ಸ್ನೇಹಿತರು. ಮಗನ ಮದುವೆ ಮಾಡಲು ಸ್ವತಂತ್ರರು. ಕೊರೊನಾ ಬಾರದಿರಲಿ ಎಂದು ಕೆಲವು ನಿಯಮಗಳನ್ನು ಮಾಡಲಾಗಿದೆ ಎಂದು ಸಚಿವರು ಹೇಳಿದ್ದರು.

ಪೋಲಿಸ್ ಇಲಾಖೆಯ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗಿದೆ. ಔರದ್ಕರ್ ವರದಿ ಜಾರಿ ಮಾಡಿ ಪೊಲೀಸರ ಮೂಲವೇತನ ಹೆಚ್ಚಿಸಲಾಗಿದೆ ಎಂದು ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

‘ಯಾರಿಗೂ ಕೊರೊನಾ ಬರಲ್ಲ’: ಲಾಕ್‌ಡೌನ್ ಹಿನ್ನೆಲೆಯಲ್ಲಿ ನನ್ನ ಪುತ್ರನ ಮದುವೆ ಮುಂದುಡಲಾಗಿತ್ತು. ಕಲ್ಯಾಣ ಮಂಟಪಗಳು ಸಿಗಲಿಲ್ಲ. ಹೇಗಾಗಿ ಸ್ವ ಗ್ರಾಮದಲ್ಲಿ ಪುತ್ರನ ಮದುವೆ ಮಾಡಿದ್ದೇನೆ ಎಂದು ಪರಮೇಶ್ವರ ನಾಯ್ಕ ಹೇಳಿದ್ದಾರೆ.

ಜನ ಜಾಸ್ತಿ ಸೇರಿದ ಕಾರಣ ತೊಂದರೆ ಆಗಿರುವುದು ನಿಜ. ಇದಕ್ಕಾಗಿ ಫೊಲೀಸರು ನೋಟಿಸ್ ನೀಡಿದ್ದಾರೆ. ನಾನು ಯಾರ ಬಗ್ಗೆಯೂ ಆರೋಪ‌ ಮಾಡಲ್ಲ. ನನ್ನ ಮೇಲಿ‌ನ ಪ್ರೀತಿಗೊಸ್ಕರ ಜನ ಜಾಸ್ತಿ ಬಂದಿದ್ದಾರೆ. ಯಾರಿಗೂ ಕೊರೊನಾ ಬರಲ್ಲ ಎಂದು ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಲಕ್ಷ್ಮಿಪುರ ತಾಂಡಾದಲ್ಲಿ ಹೇಳಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.