ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಕಾಲೇಜುಗಳ ಲ್ಯಾಟರಲ್ ಪ್ರವೇಶಕ್ಕೆ ನಡೆಸಿದ್ದ ಪ್ರವೇಶ ಪರೀಕ್ಷೆಯ (ಡಿಸಿಇಟಿ) ತಾತ್ಕಾಲಿಕ ಸರಿ ಉತ್ತರ ಪ್ರಕಟಿಸಿದೆ.
ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಜೂನ್ 26ರ ಬೆಳಿಗ್ಗೆ 11ರ ಒಳಗೆ ಸಲ್ಲಿಸಬಹುದು. ವರ್ಷನ್ ಕೋಡ್, ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆ ಸಂಖ್ಯೆಯ ವಿವರಗಳನ್ನು ನಮೂದಿಸಿ, ಅದಕ್ಕೆ ಪೂರಕ ಸಮರ್ಥನೆಗಳನ್ನು ಪಿಡಿಎಫ್ ರೂಪದಲ್ಲಿ ಸಲ್ಲಿಸಬೇಕು. ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದೆ ಅಥವಾ ಆಧಾರ ರಹಿತವಾಗಿ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕೆಇಎ ಸ್ಪಷ್ಟಪಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.