ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಕಾನೂನು ತಜ್ಞರ ಜತೆ ಚರ್ಚೆ ಮಾಡಲಾಗಿದ್ದು, ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಅವರು, ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಪ್ರಾಧಿಕಾರ ಸೂಚಿಸಿದೆ. ಮುಂದಿನ ನಡೆಯ ಕುರಿತು ಕಾನೂನು ತಜ್ಞರ ಜತೆ ಚರ್ಚೆ ಮಾಡಲಾಗಿದೆ. ನೀರಾವರಿ ಇಲಾಖೆ ಅಧಿಕಾರಿಗಳ ಜತೆಯೂ ಮಾತುಕತೆ ನಡೆಸಲಾಗುವುದು ಎಂದರು.
‘ಮುಡಾ’ ಪ್ರಕರಣದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಹಗರಣ ನಡೆದಿರುವುದೇ ಬಿಜೆಪಿ ಅಧಿಕಾರದ ಅವಧಿಯಲ್ಲಿ. ಈಗ ಆ ಪಕ್ಷದ ನಾಯಕರು ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ. ಸಮಯ ಬಂದಾಗ ಎಲ್ಲದಕ್ಕೂ ಉತ್ತರ ನೀಡುತ್ತೇವೆ. ರಾಜಕೀಯ ಆರೋಪಗಳನ್ನು ಸಮರ್ಥವಾಗಿ ಎದುರಿಸುತ್ತೇವೆ. ವಾಲ್ಮೀಕಿ ನಿಗಮದ ಹಗರಣದ ಕುರಿತು ಎಸ್ಐಟಿ ವಿಚಾರಣೆ ನಡೆಸುತ್ತಿದೆ. ಜಾರಿ ನಿರ್ದೇಶನಾಲಯದ ಹಸ್ತಕ್ಷೇಪ ಅನಗತ್ಯ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.