ಚಿತ್ರದುರ್ಗ: ಸಮ್ಮಿಶ್ರ ಸರ್ಕಾರಕ್ಕೆ ಮಜುಗರ ತರುವ ಹೇಳಿಕೆಗಳನ್ನು ಪಕ್ಷದ ಯಾವ ಶಾಸಕರೂ ನೀಡಬಾರದು ಎಂದು ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಐಮಂಗಲದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ತನ್ವೀರ್ ಸೇಠ್ ಬಗ್ಗೆ ಸಚಿವ ಜಮೀರ್ ಅಹಮ್ಮದ್ ನೀಡಿದ ಏಕವಚನದ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದರು.
ಕೆಪಿಸಿಸಿ ಅಧ್ಯಕ್ಷನಾಗಿ ಪಕ್ಷದ ನಾಯಕರಿಗೆ ಸೂಚಿಸಿದ್ದೇನೆ. ಸೂಚನೆ ಉಲ್ಲಂಘಿಸಿದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು. ಸಮ್ಮಿಶ್ರ ಸರ್ಕಾರ 5 ವರ್ಷ ಪೂರೈಸುವುದರಲ್ಲಿ ಅನುಮಾನ ಇಲ್ಲ ಎಂದು ಪುನರುಚ್ಛರಿಸಿದರು.
ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಚುನಾವಣೆ ಸಂದರ್ಭದಲ್ಲೂ ಕಾಂಗ್ರೆಸ್ ಪಕ್ಷದ ನಾಯಕರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಉದ್ದೇಶ ಪೂರ್ವಕವಾಗಿ ದಾಳಿ ನಡೆಸಿದೆ ಎಂದರು.
ಬೆಂಗಳೂರು ನಗರದ ಗುಂಡಿ ಮುಚ್ಚುತ್ತಿಲ್ಲ ಎಂಬುದು ಸುಳ್ಳು. ಈಗಾಗಲೇ ಸಾವಿರಾರು ಗುಂಡಿ ಮುಚ್ಚಲಾಗಿದೆ.ಮಾಧ್ಯಮದವರೇ ಆಗಲಿ , ನಾಗರಿಕರೇ ಆಗಲಿ ಎಲ್ಲರಿಗೂ ಸ್ಪಂದಿಸುತ್ತಿದ್ದೇವೆ. ವಾಟ್ಸ್‌ಆ್ಯಪ್ ಮೂಲಕ ಮಾಹಿತಿ ನೀಡಿದರೂ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.