ಬೆಂಗಳೂರು: ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಜನವರಿ 1ರಿಂದ ಪೂರ್ವಾನ್ವಯ ಆಗುವಂತೆ ಶೇಕಡ 3.75ರಷ್ಟು ಹೆಚ್ಚಳ ಮಾಡಿ ಹಣಕಾಸು ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ.
ಮೂಲ ವೇತನದ ಶೇ 38.75ರಷ್ಟಿದ್ದ ತುಟ್ಟಿಭತ್ಯೆಯನ್ನು ಶೇ 42.5ಕ್ಕೆ ಹೆಚ್ಚಳ ಮಾಡಲಾಗಿದೆ. ನಿವೃತ್ತ ನೌಕರರು, ಕುಟುಂಬ ಪಿಂಚಣಿ ಪಡೆಯುತ್ತಿರುವವರಿಗೂ ಈ ಹೆಚ್ಚಳ ಅನ್ವಯವಾಗಲಿದೆ. ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ), ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ, ಭಾರತೀಯ ಕೃಷಿ ಸಂಶೋಧನಾ ಮಂಡಳಿ, ನ್ಯಾಯಾಂಗ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿಗಳ ಪೂರ್ಣಾವಧಿ ನೌಕರರಿಗೂ ತುಟ್ಟಿಭತ್ಯೆ ಹೆಚ್ಚಳವಾಗಲಿದೆ.
ತುಟ್ಟಿ ಭತ್ಯೆಯ ಬಾಕಿ ಮೊತ್ತವನ್ನು ಮಾರ್ಚ್ ವೇತನ ಬಟವಾಡೆಯ ನಂತರವೇ ಪಾವತಿ ಮಾಡಲಾಗುತ್ತದೆ. ತುಟ್ಟಿಭತ್ಯೆ ಏರಿಕೆಯಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ₹1,792.91 ಕೋಟಿಯಷ್ಟು ಹೊರೆಯಾಗಲಿದೆ ಎಂದು ಅಂದಾಜು ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.