ADVERTISEMENT

ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣ ಇಳಿಕೆ: ವರದಿ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2022, 16:17 IST
Last Updated 11 ಮಾರ್ಚ್ 2022, 16:17 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು:ಕೇಂದ್ರ ಆರೋಗ್ಯ ಸಚಿವಾಲಯದ ತಾಯಿ ಮತ್ತು ಮಕ್ಕಳ ವಿಭಾಗವು ಮಾದರಿ ನೋಂದಣಿ ವ್ಯವಸ್ಥೆಯ (ಎಸ್‌ಆರ್‌ಎಸ್‌) ವರದಿ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿತಾಯಂದಿರಮರಣಪ್ರಮಾಣವು 92ರಿಂದ 83ಕ್ಕೆ ಇಳಿಕೆ ಕಂಡಿದೆ.

ಹೆರಿಗೆ ವೇಳೆತಾಯಂದಿರಮರಣದ ಅನುಪಾತ ಕುರಿತಂತೆಪ್ರತಿ ಎರಡು ವರ್ಷಕ್ಕೊಮ್ಮೆಎಸ್‌ಆರ್‌ಎಸ್‌ ವರದಿ ಬಿಡುಗಡೆ ಮಾಡಲಾಗುತ್ತಿದೆ. 2016-18ರ ವರದಿಯ ಪ್ರಕಾರ ರಾಜ್ಯದಲ್ಲಿ ಪ್ರತಿ ಒಂದು ಲಕ್ಷ ಹೆರಿಗೆಗೆ92 ತಾಯಂದಿರು ಮೃತಪಡುತ್ತಿದ್ದರು. 2017-19ರಲ್ಲಿಮರಣಪ್ರಮಾಣಇಳಿಕೆಯಾಗಿದೆ. ಇದರಿಂದಾಗಿ ರಾಜ್ಯ 9ನೇ ಸ್ಥಾನದಿಂದ 8ನೇ ಸ್ಥಾನಕ್ಕೆ ಇಳಿಕೆಯಾಗಿದೆ. ವರ್ಷಕ್ಕೆ ಒಂದು ಲಕ್ಷಕ್ಕಿಂತ ಹೆಚ್ಚು ಹೆರಿಗೆ ನಡೆಯುವ ರಾಜ್ಯಗಳನ್ನು ಮಾತ್ರ ಸಮೀಕ್ಷೆಗೆ ಪರಿಗಣಿಸಲಾಗುತ್ತಿದೆ. ಹೀಗಾಗಿ, ದೇಶದ19 ರಾಜ್ಯಗಳು ಸಮೀಕ್ಷೆಗೆ ಒಳಪಟ್ಟಿದ್ದವು.

ಕಡಿಮೆಮರಣಪ್ರಮಾಣಹೊಂದಿರುವ ರಾಜ್ಯಗಳಲ್ಲಿ ಕೇರಳ (30), ಮಹಾರಾಷ್ಟ್ರ (38), ತೆಲಂಗಾಣ (56),ಆಂಧ್ರಪ್ರದೇಶ (58) ಹಾಗೂ ತಮಿಳುನಾಡು (58) ಕ್ರಮವಾಗಿ ಮೊದಲ ಐದು ಸ್ಥಾನದಲ್ಲಿವೆ.ಈ ಪಟ್ಟಿಯಲ್ಲಿ ಅಸ್ಸಾಂ (205) ಕಡೆಯ ಸ್ಥಾನದಲ್ಲಿದೆ. ದಕ್ಷಿಣದ ಐದು ರಾಜ್ಯಗಳಿಗೆ ಹೋಲಿಕೆ ಮಾಡಿದಲ್ಲಿ ಕರ್ನಾಟಕದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿತಾಯಂದಿರಮರಣ ವರದಿಯಾಗುತ್ತಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.