ADVERTISEMENT

ಮೇಕೆದಾಟು ಅಣೆಕಟ್ಟು ನಿರ್ಮಾಣ ಸಂಬಂಧ ಕೇಂದ್ರಕ್ಕೆ ನಿಯೋಗ: ರಮೇಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2020, 10:14 IST
Last Updated 14 ಸೆಪ್ಟೆಂಬರ್ 2020, 10:14 IST
ಮೇಕೆದಾಟುವಿನಲ್ಲಿ ಸಚಿವ ರಮೇಶ ಜಾರಕಿಹೊಳಿ ಹಾಗೂ ವಿಧಾನಪರಿಷತ್‌ ಸದಸ್ಯ ಸಿ.ಪಿ ಯೋಗೇಶ್ವರ್‌
ಮೇಕೆದಾಟುವಿನಲ್ಲಿ ಸಚಿವ ರಮೇಶ ಜಾರಕಿಹೊಳಿ ಹಾಗೂ ವಿಧಾನಪರಿಷತ್‌ ಸದಸ್ಯ ಸಿ.ಪಿ ಯೋಗೇಶ್ವರ್‌    

ರಾಮನಗರ: ರಾಜ್ಯದ ಮಹಾತ್ಮಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಮೇಕೆದಾಟು ಅಣೆಕಟ್ಟೆ‌ ನಿರ್ಮಾಣ ಸಂಬಂಧ ಇನ್ನೆರಡು ದಿನದಲ್ಲಿ ಮುಖ್ಯಮಂತ್ರಿ ಜೊತೆಗೂಡಿ ಕೇಂದ್ರ ಜಲಶಕ್ತಿ ಹಾಗೂ ಪರಿಸರ ಸಚಿವರನ್ನು ಭೇಟಿ ಮಾಡಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಕನಕಪುರ ತಾಲ್ಲೂಕಿನ ಸಂಗಮ-ಮೇಕೆದಾಟು ಪ್ರದೇಶಕ್ಕೆ ಸೋಮವಾರ ಭೇಟಿ ನೀಡಿ, ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು. ಯೋಜನೆಗಾಗಿ 9 ಸಾವಿರ ಕೋಟಿ ವೆಚ್ಚದ ಡಿಪಿಆರ್ ಈಗಾಗಲೇ ಸಿದ್ಧವಾಗಿದೆ. ಕಳೆದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲೇ ಇದರ ಡಿಪಿಆರ್ ಸಿದ್ಧವಾಗಿದ್ದು, ನಂತರ ನನೆಗುದಿಗೆ ಬಿದ್ದಿತ್ತು. ಈಗ ಮತ್ತೊಮ್ಮೆ ಪರಿಷ್ಕೃತ ಪ್ರಸ್ತಾವ ಸಲ್ಲಿಸಲಾಗುವುದು ಎಂದರು.

ಮುಂದಿನ ವರ್ಷ ತಮಿಳುನಾಡಿನಲ್ಲಿ‌ ಚುನಾವಣೆ ಇದೆ. ಹೀಗಾಗಿ ನೆರೆಯ ರಾಜ್ಯದಿಂದ ಸಹಜವಾಗಿಯೇ ಇದಕ್ಕೆ ಅಡೆತಡೆ ಹೆಚ್ಚಿದೆ. ಅಗತ್ಯ ಬಿದ್ದರೆ ತಮಿಳುನಾಡು ಸರ್ಕಾರದ ಜೊತೆ ಮಾತುಕತೆ ನಡೆಸಲಾಗುವುದು ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.