ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಯ ಅಂತಿಮಪಟ್ಟಿಯಲ್ಲಿ ಸ್ಥಾನ ಪಡೆದ ಅಭ್ಯರ್ಥಿಗಳು ನೇಮಕಾತಿ ಆದೇಶ ಕೊಡಿಸುವಂತೆ ಕೋರಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.
‘ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ ಬರೆದು ಮೆರಿಟ್ ಆಧಾರದ ಮೇಲೆ ಆಯ್ಕೆಯಾಗಿದ್ದೇವೆ. ನೇಮಕಾತಿ ಪ್ರಕ್ರಿಯೆಗೆ ಕೆಲವರು ಅನಗತ್ಯ ಆಕ್ಷೇಪಣೆ, ಆರೋಪಗಳನ್ನು ಮಾಡಿದ್ದಾರೆ. ಅಕ್ರಮ ನಡೆದಿರುವ ಕುರಿತು ಸೂಕ್ತ ದಾಖಲೆಗಳಿದ್ದರೆ ನೀಡಲಿ. ಸಾಕ್ಷಾಧಾರ ನೀಡದೇ ಅನಗತ್ಯವಾಗಿ ಪ್ರಕ್ರಿಯೆ ವಿಳಂಬ ಮಾಡುತ್ತಿದ್ದಾರೆ’ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
‘ಕರ್ನಾಟಕ ಪರೀಕ್ಷಾ ಪ್ರಾಧಿಕಾರ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪರೀಕ್ಷೆ ನಡೆಸಿದೆ. ವಿಷಯವಾರು ರೂಪಿಸಿದ್ದ ಪ್ರಶ್ನೆಪತ್ರಿಕೆಗಳೂ ಕಠಿಣವಾಗಿದ್ದವು. ಪರೀಕ್ಷೆ ಬರೆದಿದ್ದವರಲ್ಲಿ ಪ್ರತಿಭಾವಂತರು ಆಯ್ಕೆಯಾಗಿದ್ದಾರೆ. ರಾಜ್ಯಪಾಲರು ಸೂಕ್ತ ಮಾಹಿತಿ ಪಡೆದು, ಆಯ್ಕೆಯಾದ ಅಭ್ಯರ್ಥಿಗಳ ನೆರವಿಗೆ ಬರಬೇಕು’ ಎಂದು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.