ಬೆಂಗಳೂರು: ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಅಂಜನಾದ್ರಿ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಹನುಮನ ಗದೆ, ರಾಮನ ಧನಸ್ಸು ಹೋಲುವ ದೀಪದ ಕಂಬಗಳ ತೆರವಿಗೆ ಆದೇಶ ನೀಡಿದ ತಹಶೀಲ್ದಾರ್ ಅವರನ್ನು ಅಮಾನತುಗೊಳಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದಾರೆ.
‘ತಹಶೀಲ್ದಾರ್ ಅವರು ಆದೇಶ ಹೊರಡಿಸುವ ಸಂದರ್ಭದಲ್ಲಿ ಪರಿಶೀಲನೆ ನಡೆಸದೆ, ಅಧಿಕಾರ ವ್ಯಾಪ್ತಿ ತನಗಿದೆಯೇ ಇಲ್ಲವೇ ಎಂಬುದರ ಬಗ್ಗೆ ಗಮನಹರಿಸದೇ ಕಂಬಗಳನ್ನು ತೆರವುಗೊಳಿಸಲು ಮತ್ತು ಕೆಆರ್‌ಐಡಿಎಲ್ ಮೇಲೆ ಕೇಸ್ ದಾಖಲಿಸಲು ಆದೇಶ ಹೊರಡಿಸಿದ್ದರು’ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
‘ತನ್ನ ಕರ್ತವ್ಯ ಹಾಗೂ ಬದ್ಧತೆಗಳ ಬಗ್ಗೆ ಯಾವುದೇ ನಿಲುವು ಇಲ್ಲದಿರುವ ತಹಶೀಲ್ದಾರ್ ವಿರುದ್ಧ ಕೂಡಲೇ ಶಿಸ್ತುಕ್ರಮ ತೆಗೆದುಕೊಳ್ಳಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.