ದಾವಣಗೆರೆ: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಪ್ರತಿಮಾ ಅವರ ಹತ್ಯೆಯ ಬಗ್ಗೆ ಹಲವು ಸಂಶಯಗಳು ಇದ್ದು, ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದರು.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೆಲವರು ಕೌಟುಂಬಿಕ ಕಾರಣ, ಇಲಾಖೆ ವಿಚಾರ, ಮತ್ತೆ ಕೆಲವರು ಇಲಾಖೆ ಕಾರು ಚಾಲಕನನ್ನು ಸೇವೆಯಿಂದ ಬಿಡುಗಡೆಗೊಳಿಸಿರುವುದು ಕಾರಣ ಎಂದು ಹೇಳಲಾಗುತ್ತಿದ್ದಾರೆ. ಈ ಎಲ್ಲ ವಿಚಾರಗಳ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದರು
ಅಕ್ರಮ ಗಣಿಗಾರಿಕೆಯ ಬಗ್ಗೆಯೂ ಆರೋಪ ಕೇಳಿ ಬಂದಿದೆ. ಹೀಗಾಗಿ ಈ ಸಾವಿನ ಬಗ್ಗೆ ತನಿಖೆ ಆದ ಮೇಲೆ ಸ್ಪಷ್ಟವಾಗಿ ಹೇಳಲಾಗುವುದು ಎಂದರು.
ಶನಿವಾರ ಇಲಾಖೆಯ ವಿಡಿಯೊ ಕಾನ್ಪರೆನ್ಸ್ ನಲ್ಲಿ ಪ್ರತಿಮಾ ಅವರು ಭಾಗಿಯಾಗಿದ್ದರು. ಒಳ್ಳೆಯ ಅಧಿಕಾರಿ ಎಂದು ಹೇಳಿದರು.
ಎಲ್ಲರಿಗೂ ಪೊಲೀಸ್ ಭದ್ರತೆ ಕಲ್ಪಿಸಲು ಆಗುವುದಿಲ್ಲ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.