ADVERTISEMENT

ದೇವರಾಜ ಅರಸು ಟ್ರಕ್ ಟರ್ಮಿನಲ್ ಅಕ್ರಮ: ಶಂಕರಪ್ಪ ಅಮಾನತು

​ಪ್ರಜಾವಾಣಿ ವಾರ್ತೆ
Published 31 ಮೇ 2024, 16:14 IST
Last Updated 31 ಮೇ 2024, 16:14 IST
ಎಸ್‌. ಶಂಕರಪ್ಪ
ಎಸ್‌. ಶಂಕರಪ್ಪ   

ಬೆಂಗಳೂರು: ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ (ಡಿಡಿಯುಟಿಟಿಎಲ್) ₹ 47.10 ಕೋಟಿ ಅಕ್ರಮ ಎಸಗಿದ ಆರೋಪ ಎದುರಿಸುತ್ತಿರುವ ಎಸ್‌. ಶಂಕರಪ್ಪ ಅವರನ್ನು ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಸ್ಥಾನದಿಂದ ಅಮಾನತುಗೊಳಿಸಿದೆ.

ಶಂಕರಪ್ಪ ಹಿಂದೆ ಡಿಡಿಯುಟಿಟಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಅವರ ಅಧಿಕಾರದ ಅವಧಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಪುರಾವೆಗಳನ್ನು ಸಂಗ್ರಹಿಸಿದ್ದ ರಾಜ್ಯ ಸಿಐಡಿ ಅಧಿಕಾರಿಗಳು ಮೇ 27ರಂದು ಅವರನ್ನು ಬಂಧಿಸಿದ್ದರು. 

ಎಸ್‌. ಶಂಕರಪ್ಪ ನ್ಯಾಯಾಂಗ ಬಂಧನದಲ್ಲಿ ಇರುವುದರಿಂದ ನಿಯಮಾನುಸಾರ ಸೇವೆಯಿಂದ ಅಮಾನತುಗೊಳಿಸಿ ಸರ್ಕಾರವು ಶುಕ್ರವಾರ ಆದೇಶ ಹೊರಡಿಸಿದೆ.

ADVERTISEMENT

ಆರೋಪ ವಿವರ: ಡಿಡಿಯುಟಿಟಿಎಲ್‌ನಲ್ಲಿ 2021–23ರ ಅವಧಿಯಲ್ಲಿ ₹ 47.10  ಕೋಟಿ ಅಕ್ರಮ ನಡೆದಿದೆ ಎಂದು ಹಾಲಿ‌ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ) ಸಿ.ಎನ್. ಶಿವಪ್ರಕಾಶ್ ಅವರು ವಿಲ್ಸನ್ ಗಾರ್ಡನ್ ಠಾಣೆಗೆ ದೂರು ನೀಡಿದ್ದರು. 

₹ 10 ಕೋಟಿವರೆಗೆ ತುಂಡು ಗುತ್ತಿಗೆ ನೀಡಲು ನಿರ್ದೇಶಕ ಮಂಡಳಿ ಸಭೆಯಲ್ಲಿ ಅಕ್ರಮವಾಗಿ ಅನುಮೋದನಾ ನಿರ್ಣಯ ಮಾಡಲಾಗಿತ್ತು. 668 ಕಾಮಗಾರಿಗಳನ್ನೇ ನಡೆಸದೇ ನಕಲಿ ದಾಖಲೆಗಳನ್ನು ಸೃಷ್ಟಿಸಿ ಹಣ ಪಡೆಯಲಾಗಿತ್ತು ಎಂಬುದು ಎಸ್‌. ಶಂಕರಪ್ಪ ಮೇಲಿರುವ ಆರೋಪವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.