ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ–ಐಜಿಪಿ) ಹುದ್ದೆಯನ್ನು ಹೆಚ್ಚುವರಿಯಾಗಿ ವಹಿಸಿಕೊಂಡಿದ್ದ ಅಲೋಕ್ ಮೋಹನ್ ಅವರನ್ನು ಅದೇ ಹುದ್ದೆಗೆ ಕಾಯಂ ಮಾಡಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.
2020 ಜನವರಿ 31ರಂದು ರಾಜ್ಯದ 41ನೇ ಡಿಜಿ–ಐಜಿಪಿ ಆಗಿ ಅಧಿಕಾರ ವಹಿಸಿಕೊಂಡಿದ್ದ ಪ್ರವೀಣ್ ಸೂದ್ ಅವರನ್ನು ಕೇಂದ್ರೀಯ ತನಿಖಾ ತನಿಖಾ ದಳದ (ಸಿಬಿಐ) ನೂತನ ನಿರ್ದೇಶಕರಾಗಿ ಮೇ ತಿಂಗಳಿನಲ್ಲಿ ನೇಮಕ ಮಾಡಲಾಗಿತ್ತು. ಇದರಿಂದಾಗಿ ತೆರವಾಗಿದ್ದ ಡಿಜಿ–ಐಜಿಪಿ ಹುದ್ದೆಗೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಜಿಪಿ ಆಗಿದ್ದ ಅಲೋಕ್ ಮೋಹನ್ ಅವರನ್ನು ಪ್ರಭಾರಿಯಾಗಿ ನಿಯೋಜಿಸಲಾಗಿತ್ತು.
ಮೇ 22ರಂದು ಅಧಿಕಾರ ವಹಿಸಿಕೊಂಡಿರುವ ಅಲೋಕ್ ಮೋಹನ್ ತಮ್ಮ ಕೆಲಸ ಮುಂದುವರಿಸಿದ್ದಾರೆ. ಇದರ ಬೆನ್ನಲ್ಲೇ ಅಲೋಕ್ ಮೋಹನ್ ಅವರನ್ನು ರಾಜ್ಯದ 42ನೇ ಡಿಜಿ– ಐಜಿಪಿ ಆಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬಿಹಾರ ರಾಜ್ಯದ ಪಟ್ನಾದ ಅಲೋಕ್ ಮೋಹನ್, 1987ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ. ಎಂ.ಎಸ್‌ಸಿ ಹಾಗೂ ಎಂ.ಫಿಲ್ ಪದವೀಧರ. ಅಲೋಕ್ ಮೋಹನ್ ಅವರ ಅಧಿಕಾರಾವಧಿ ಒಂದು ವರ್ಷ ಎಂಟು ತಿಂಗಳಿದ್ದು, 2025ರ ಏಪ್ರಿಲ್‌ನಲ್ಲಿ ನಿವೃತ್ತರಾಗಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.