ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕಿಯಾಗಿದ್ದ (ಡಿಜಿ) ನೀಲಮಣಿ ಎನ್ ರಾಜು ನಿವೃತ್ತರಾಗಿದ್ದು, ಅವರ ಸ್ಥಾನಕ್ಕೆ ಸಿಐಡಿ ವಿಭಾಗದ ಡಿಜಿಪಿ ಆಗಿದ್ದ ಪ್ರವೀಣ್ ಸೂದ್ ಅವರನ್ನು ರಾಜ್ಯ ಸರ್ಕಾರ ಶುಕ್ರವಾರ ನೇಮಕ ಮಾಡಿದೆ.
ಡಿಜಿ ನೇಮಕದಲ್ಲಿ ಅಧಿಕಾರಿಗಳ ಸೇವಾ ಹಿರಿತನ ಕಡೆಗಣಿಸಿ ಸೂದ್ ಅವರಿಗೆ ಈ ಹುದ್ದೆ ನೀಡಲಾಗಿದೆ ಎಂಬ ಟೀಕೆ ವ್ಯಕ್ತವಾಗಿದೆ.
ನೇಮಕಾತಿ ಆದೇಶ ಹೊರಬೀಳುತ್ತಿದ್ದಂತೆ ಪೊಲೀಸ್ ಪ್ರಧಾನ ಕಚೇರಿಗೆ ಬಂದ ಸೂದ್, ನೀಲಮಣಿ ರಾಜು ಅವರಿಂದ ಬ್ಯಾಟನ್ ಪಡೆಯುವ ಮೂಲಕ ಅಧಿಕಾರ ವಹಿಸಿಕೊಂಡರು.
ಸೇವಾ ಹಿರಿತನದಲ್ಲಿ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಎ.ಎಂ.ಪ್ರಸಾದ್ ಮೊದಲಿಗರು. ಸೂದ್ ಎರಡನೇ ಸ್ಥಾನದಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.