ಬೆಂಗಳೂರು: ರಾಜ್ಯದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿಯಾಗಿ ಕೆಲಸ ನಿರ್ವಹಿಸಿ ನಿವೃತ್ತರಾದ ನೀಲಮಣಿ ಎನ್. ರಾಜು ಸೇರಿದಂತೆ ಮೂವರು ಐಪಿಎಸ್ ಅಧಿಕಾರಿಗಳನ್ನು ಶುಕ್ರವಾರ ಬೀಳ್ಕೊಡಲಾಯಿತು.
ಕೋರಮಂಗಲದ ಪೊಲೀಸ್ ಮೀಸಲು ಪಡೆ (ಕೆಎಸ್‌ಆರ್‌ಪಿ) ಮೈದಾನದಲ್ಲಿ ನೀಲಮಣಿ ರಾಜು, ಗೃಹ ರಕ್ಷಕ ದಳದ ಡಿಜಿಪಿ ಎಂ.ಎನ್.ರೆಡ್ಡಿ ಹಾಗೂ ಪೊಲೀಸ್ ವಸತಿ ನಿಗಮದ ಮಹಾನಿರ್ದೇಶಕ ರಾಘವೇಂದ್ರ ಔರಾದ್ಕರ್ ಅವರಿಗೆ ಇಲಾಖೆ ಸಿಬ್ಬಂದಿ ಗೌರವ ವಂದನೆ ಸಲ್ಲಿಸಿದರು.
ನೀಲಮಣಿ ರಾಜು ಮಾತನಾಡಿ, ‘36 ವರ್ಷಗಳ ಸೇವೆ ಖುಷಿ ತಂದಿದೆ. ಚುನಾವಣೆ ಸಂದರ್ಭದಲ್ಲೂ ಭದ್ರತೆ ಉತ್ತಮವಾಗಿತ್ತು. ಕೇಂದ್ರ ಚುನಾವಣಾ ಆಯೋಗದ ಪ್ರಶಸ್ತಿ ಸಹ ಬಂತು’ ಎಂದರು.
ರಾಘವೇಂದ್ರ ಔರಾದ್ಕರ್ ಮಾತನಾಡಿ, ‘ಹಿಂದುಳಿದ ಪ್ರದೇಶವಾದ ಬೀದರ್‌ನಿಂದ ಕೆಲಸಕ್ಕೆ ಸೇರಿ ಮಾಡಿದ ಕೆಲಸ ತೃಪ್ತಿ ತಂದಿದೆ. ಪೊಲೀಸರ ವೇತನ ಪರಿಷ್ಕರಣೆ ಅಧ್ಯಯನ ಹಾಗೂ ವರದಿ ನೀಡುವ ಕರ್ತವ್ಯ ನಿರ್ವಹಿಸಿದ್ದೇನೆ. ಇದು ನನ್ನ ಸಾಧನೆಯೆಂದು ಭಾವಿಸುತ್ತೇನೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.