‘ಬಹಳಷ್ಟು ಅನರ್ಹರು ಬಿಪಿಎಲ್ ಪಡಿತರ ಚೀಟಿಯನ್ನು ಪಡೆದುಕೊಂಡಿದ್ದಾರೆ. ಅವರ ಕಾರ್ಡ್‌ಗಳನ್ನು ರದ್ದು ಪಡಿಸಲಾಗುತ್ತಿದೆ. ಈ ಕ್ರಮದಿಂದ ಶೇ 90ರಷ್ಟು ಅನರ್ಹರ ಪಡಿತರ ಚೀಟಿಗಳು ರದ್ದಾಗಲಿವೆ. ಈ ಸಂದರ್ಭದಲ್ಲಿ ಶೇ 5ರಷ್ಟು ಬಡವರ ಅಥವಾ ಅರ್ಹರ ಪಡಿತರ ಚೀಟಿಗಳು ರದ್ದಾಗಿರಬಹುದು. ಅದನ್ನು ಸರಿಪಡಿಸುವ ಕೆಲಸ ಮಾಡುತ್ತೇವೆ’ ಎಂದು ಆರೋಗ್ಯ ಸಚಿವ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿನಲ್ಲಿ ಗುರುವಾರ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.