ADVERTISEMENT

ಹೆಣ್ಣು ಭ್ರೂಣ ಹತ್ಯೆ ಆರೋಪಿಗಳ ವಿರುದ್ಧ ಪಿಸಿ ಆ್ಯಂಡ್ ಪಿಎನ್‌ಡಿಟಿ ಕೇಸ್: ದಿನೇಶ್

​ಪ್ರಜಾವಾಣಿ ವಾರ್ತೆ
Published 15 ಜುಲೈ 2024, 19:37 IST
Last Updated 15 ಜುಲೈ 2024, 19:37 IST
<div class="paragraphs"><p>ದಿನೇಶ್ ಗುಂಡೂರಾವ್</p></div>

ದಿನೇಶ್ ಗುಂಡೂರಾವ್

   

ಬೆಂಗಳೂರು: ‘ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಪಿಸಿ ಆ್ಯಂಡ್ ಪಿಎನ್‌ಡಿಟಿ ಅಡಿ ಪ್ರಕರಣ ದಾಖಲಿಸಲಾಗುತ್ತಿದೆ. ಉತ್ತಮ ವಕೀಲರನ್ನು ನಿಯೋಜಿಸುವ ಮೂಲಕ ಆರೋಪಿಗಳಿಗೆ ಜಾಮೀನು ಸಿಗದಂತೆ ಮಾಡಲು ಸೂಚಿಸಲಾಗಿದೆ’ ಎಂದು ದಿನೇಶ್ ಗುಂಡೂರಾವ್
ತಿಳಿಸಿದರು.

ಕಾಂಗ್ರೆಸ್‌ನ ಯು.ಬಿ. ವೆಂಕಟೇಶ್ ಮತ್ತು, ಬಿಜೆಪಿಯ ಸಿ.ಟಿ. ರವಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಹೆಣ್ಣು ಭ್ರೂಣ ಹತ್ಯೆ ನಿಯಂತ್ರಣಕ್ಕೆ ಎಲ್ಲ ಕ್ರಮಗಳನ್ನು ವಹಿಸಿದ್ದೇವೆ. ಸಮಗ್ರ ಮಾಹಿತಿಗಳನ್ನು ಸಂಗ್ರಹಿಸಿ ಆರೋಪಿಗಳನ್ನು ಬಂಧಿಸಬೇಕಿದ್ದು, ಆ ಕೆಲಸವನ್ನೂ ಮಾಡುತ್ತಿದ್ದೇವೆ’ ಎಂದರು.

ADVERTISEMENT

‘ಇಲಾಖೆಯ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಇಂಥ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಿಸಿ, ಭಯ ಹುಟ್ಟಿಸಿ ಮಟ್ಟ ಹಾಕಬೇಕು’ ಎಂದು ವೆಂಕಟೇಶ್ ಸಲಹೆ ನೀಡಿದರು.

‘ಜಿಲ್ಲಾ ವೈದ್ಯಾಧಿಕಾರಿ ಗಳ ಮೂಲಕ ಎಫ್ಐಆರ್ ದಾಖಲಿಸಲಾಗುತ್ತಿದೆ. ಈಗಾಗಲೇ 23 ಆಸ್ಪತ್ರೆಗಳ ಮೇಲೆ ಪ್ರಕರಣ ದಾಖಲಿಸಿದ್ದೇವೆ. ಮೈಸೂರಿನ ಮಾತಾ ಆಸ್ಪತ್ರೆ ಪರವಾನಗಿ ರದ್ದು ಮಾಡಿದ್ದೇವೆ’ ಎಂದು ದಿನೇಶ್‌ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.