ಬೆಂಗಳೂರು: ಮೈಸೂರಿನ ಕೆಆರ್‌ಎಸ್ ಬಳಿ 198 ಎಕರೆ ಪ್ರದೇಶದಲ್ಲಿ ₹ 1,450 ಕೋಟಿ ವೆಚ್ಚದಲ್ಲಿ ಡಿಸ್ನಿಲ್ಯಾಂಡ್ ಮಾದರಿ ಉದ್ಯಾನ ನಿರ್ಮಿಸಲಾಗುವುದು. ಅಣೆಕಟ್ಟೆಯ ಸುರಕ್ಷತೆಗೆ ಧಕ್ಕೆಯಾಗದಂತೆ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ವಿಧಾನ ಪರಿಷತ್‌ನಲ್ಲಿ ಗುರುವಾರ ಕಾಂಗ್ರೆಸ್ ಸದಸ್ಯ ಮಧು ಜಿ.ಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರದ ಭೂಮಿಯಲ್ಲೇ ಉದ್ಯಾನ ನಿರ್ಮಿಸಲಾಗುವುದು. ಯೋಜನಾ ವರದಿಯನ್ನು ಅನುಮೋದನೆಗಾಗಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಗೆ ಸಲ್ಲಿಸಲಾಗಿತ್ತು. ಪರಿಷ್ಕೃತ ಪ್ರಸ್ತಾವ ಸಲ್ಲಿಸುವಂತೆ ಇಲಾಖೆ ಸಲಹೆ ನೀಡಿದೆ. ಅನುಮೋದನೆಯ ನಂತರ ಯೋಜನೆ ಅನುಷ್ಠಾನಕ್ಕೆ ಕಂಪನಿ ಗುರುತಿಸಲಾಗುವುದು ಎಂದರು.
ಕೆಆರ್‌ಎಸ್ ಹೊರತುಪಡಿಸಿ ರಾಜ್ಯದ ಇತರೆ ಭಾಗಗಳಲ್ಲಿ ಸಿಡ್ನಿಲ್ಯಾಂಡ್ ಮಾದರಿ ಉದ್ಯಾನ ನಿರ್ಮಿಸುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.