ADVERTISEMENT

ನಮ್ಮ ಕುಟುಂಬದ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ: ಡಿಕೆಶಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಜೂನ್ 2024, 3:38 IST
Last Updated 28 ಜೂನ್ 2024, 3:38 IST
   

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ಪಕ್ಷ ಸೂಚಿಸಿದರೆ ಅದಕ್ಕೆ ಸಿದ್ಧ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದರು. ಆದರೆ ಅವರ ಕುಟುಂಬದಿಂದ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. ಇದೆಲ್ಲದಕ್ಕೂ ಅವರು ತೆರೆ ಎಳೆದಿದ್ದಾರೆ.

ಈ ಕುರಿತಾಗಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಡಿ.ಕೆ. ಶಿವಕುಮಾರ್, ‘ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು’ ಎಂದು ವಿನಂತಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಎಚ್‌.ಡಿ. ಕುಮಾರಸ್ವಾಮಿ ಅವರು ಮಂಡ್ಯ ಸಂಸದರಾಗಿ ಆಯ್ಕೆಯಾದ ಬೆನ್ನಲ್ಲೇ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.