ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಡತಗಳು ನಾಪತ್ತೆಯಾಗಿಲ್ಲ. ಕಡತಗಳನ್ನು ಯಾರೂ ಎತ್ತಿಕೊಂಡು ಹೋಗಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮುಡಾ’ ನಿವೇಶನ ಹಂಚಿಕೆ ಪ್ರಕರಣದ 144 ಕಡತಗಳು ಪತ್ತೆಯಾಗಿಲ್ಲ ಎಂಬ ಲೋಕಾಯುಕ್ತ ವರದಿ ಬಗ್ಗೆ ಮಾಹಿತಿ ಇಲ್ಲ. ಕಡತಗಳನ್ನು ಯಾರೂ ಎತ್ತಿಕೊಂಡು ಹೋಗಲು ಸಾಧ್ಯವಿಲ್ಲ, ಕಚೇರಿಯಲ್ಲೇ ಇರುತ್ತವೆ ಅಥವಾ ಯಾರಾದರೂ ಸರ್ಕಾರಕ್ಕೆ ತೋರಿಸಲು ತೆಗೆದುಕೊಂಡು ಹೋಗಿರಬಹುದು ಎಂದರು.
ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಭವಿಷ್ಯವಿದೆ ಎನ್ನುವುದು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಅರಿವಾಗಿದೆ. ಹಾಗಾಗಿಯೇ, ಬಿಜೆಪಿ, ಜೆಡಿಎಸ್ ಕಾರ್ಯಕರ್ತರು, ನಾಯಕರ ಸಹಕಾರ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಿಕ್ಕಿದೆ. ಬಿಜೆಪಿ ಪ್ರಚಾರಕ್ಕಾಗಿ ವಕ್ಫ್ ವಿಚಾರ ಬಳಸಿಕೊಳ್ಳುತ್ತಿದೆ. ಮುಸ್ಲಿಮರ ಮತ ಕೇಳುವ ನೈತಿಕತೆಯನ್ನು ಜೆಡಿಎಸ್ ಕಳೆದುಕೊಂಡಿದೆ. ಅದರ ಫಲ ಈಗಾಗಲೇ ಅವರಿಗೆ ಸಿಕ್ಕಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.