ADVERTISEMENT

ಬರ ಪರಿಹಾರ: ಅನ್ಯಾಯ ಒಪ್ಪಿಕೊಂಡ ನಿರ್ಮಲಾ- ಡಿಕೆಶಿ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2024, 16:00 IST
Last Updated 7 ಏಪ್ರಿಲ್ 2024, 16:00 IST
ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್   

ಬೆಂಗಳೂರು: ‘ಬರ ಪರಿಹಾರ ಬಿಡುಗಡೆ ಕುರಿತು ಇಷ್ಟು ದಿನ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಈಗ ಬರ ಪರಿಹಾರ ವಿಳಂಬಕ್ಕೆ ಚುನಾವಣಾ ಆಯೋಗ ಕಾರಣ ಎನ್ನುವ ಮೂಲಕ ರಾಜ್ಯಕ್ಕೆ ಅನ್ಯಾಯ ಆಗಿದ್ದನ್ನು ಒಪ್ಪಿಕೊಂಡಿದ್ದಾರೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

‌‘ಬರ ಪರಿಹಾರ ನೀಡುವಂತೆ ಬಹಳ ಹಿಂದೆಯೇ ಮನವಿ ಮಾಡಿದ್ದೆವು. ಮನವಿ ಕೊಟ್ಟ ಬಳಿಕ ನಾಲ್ಕು ತಿಂಗಳವರೆಗೂ ಯಾವುದೇ ಚುನಾವಣೆ ನೀತಿ ಸಂಹಿತೆ, ಚುನಾವಣಾ ಆಯೋಗದ ನಿರ್ಬಂಧ ಇರಲಿಲ್ಲ. ಈಗ ಚುನಾವಣಾ ಆಯೋಗದ ನೆಪ ಹೇಳುತ್ತಿದ್ದಾರೆ’ ಎಂದು ನಗರದಲ್ಲಿ ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.

‘ಕೇಂದ್ರ ಸರ್ಕಾರದ ಅಕ್ಷಮ್ಯ ಅಪರಾಧದ ಬಗ್ಗೆ ಜನರಿಗೂ ಅರಿವಾಗಿದೆ’ ಎಂದರು.

ADVERTISEMENT

ಮೇಕೆದಾಟು ಯೋಜನೆ ಕುರಿತು ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಕುಮಾರಸ್ವಾಮಿ ಅವರು ಈಗ ಮೇಕೆದಾಟು, ಮಹದಾಯಿ ಯೋಜನೆ ಬಗ್ಗೆ ಹೇಳುತ್ತಿದ್ದಾರೆ. ಅಧಿಕಾರವಿದ್ದಾಗ ಏನು ಮಾಡಿದರು’ ಎಂದು ಪ್ರಶ್ನಿಸಿದರು.

‘ನಮ್ಮ ಪಾದಯಾತ್ರೆ ಮಾಡುತ್ತಿದ್ದಾಗ ವೇಳೆ ಕಬಾಬ್ ತಿನ್ನಲು ಮಾಡುತ್ತಿದ್ದಾರೆ ಎಂದು ಎಚ್‌ಡಿಕೆ ವ್ಯಂಗ್ಯವಾಡಿದ್ದರು. ಈಗ ಅವರೇ ಪಾದಯಾತ್ರೆ ಬಗ್ಗೆ ಮಾತಾಡುತ್ತಿದ್ದಾರೆ. ಮಂಡ್ಯದಲ್ಲಿ ಅವರಿಗೆ ಬಿಸಿ ತಟ್ಟಿರುವಂತೆ ಕಾಣುತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.