ADVERTISEMENT

LS Polls: ನಾಳೆ ದೆಹಲಿಯಲ್ಲಿ ಸಭೆ; ಶೀಘ್ರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ- ಡಿಕೆಶಿ

ಹುಬ್ಬಳ್ಳಿಯಲ್ಲಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2024, 3:07 IST
Last Updated 6 ಮಾರ್ಚ್ 2024, 3:07 IST
ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ
ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ   

ಹುಬ್ಬಳ್ಳಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಮಾ.7ರಂದು ದೆಹಲಿಯಲ್ಲಿ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದರು.

‘ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಕ್ಕೆ ಜಗದೀಶ ಶೆಟ್ಟರ್ ಸದ್ಯದಲ್ಲಿಯೇ ಪಶ್ಚಾತ್ತಾಪದ ಹೇಳಿಕೆ ನೀಡಲಿದ್ದಾರೆ’ ಎಂದು ವ್ಯಂಗ್ಯವಾಡಿದರು.

ADVERTISEMENT

'ಇನ್ನೊಂದು ತಿಂಗಳು ಕಾದುನೋಡಿ. ಅವರಿಂದ ಪಶ್ಚಾತ್ತಾಪದ ಹೇಳಿಕೆ ಬರಲಿದೆ' ಎಂದರು.

'ಮಹದಾಯಿ ಕಾಮಗಾರಿ ಅನುಷ್ಠಾನಗೊಳಿಸಲು ನಾವು ಈಗಾಗಲೇ ಟೆಂಡರ್ ಕರೆದಿದ್ದೇವೆ. ಸಚಿವ ಪ್ರಲ್ಹಾದ ಜೋಶಿ ಕೇಂದ್ರದಿಂದ ನಿರಾಕ್ಷೇಪಣಾ ಪತ್ರ ಕೊಡಿಸಲಿ' ಎಂದರು.

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಡಿ.ಕೆ. ಶಿವಕುಮಾರ್ ಬಂದಿಳಿಯುತ್ತಿದ್ದಂತೆ, 'ಮುಂದಿನ ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಜೈ' ಎಂದು ಕಾರ್ಯಕರ್ತರು ಕೂಗಿದರು.

ಸಚಿವ ಸಂತೋಷ ಲಾಡ್, ಪ್ರಿಯಾಂಕ ಖರ್ಗೆ ಈ ವೇಳೆ ಜೊತೆಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.