ADVERTISEMENT

ಕೆಪಿಸಿಸಿಗೆ ಡಿ.ಕೆ. ಶಿವಕುಮಾರ್ ನೂತನ ಸಾರಥಿ?

​ಪ್ರಜಾವಾಣಿ ವಾರ್ತೆ
Published 17 ಜನವರಿ 2020, 3:42 IST
Last Updated 17 ಜನವರಿ 2020, 3:42 IST
ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್    

ನವದೆಹಲಿ: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷರನ್ನಾಗಿ ಕನಕಪುರ ಕ್ಷೇತ್ರದ ಶಾಸಕ ಡಿ.ಕೆ. ಶಿವಕುಮಾರ್ ಅವರನ್ನು ನೇಮಕ ಮಾಡುವ ಸಾಧ್ಯತೆ ಹೆಚ್ಚಿದೆ.

ದಿನೇಶ್ ಗುಂಡೂರಾವ್‌ ರಾಜೀನಾಮೆ ಕೊಟ್ಟಿದ್ದರಿಂದಾಗಿ ಹೊಸ ಅಧ್ಯಕ್ಷರ ನೇಮಕ ಪ್ರಕ್ರಿಯೆಯನ್ನು ಕಾಂಗ್ರೆಸ್‌ ಹೈಕಮಾಂಡ್‌ ಆರಂಭಿಸಿತ್ತು. ನೇಮಕ ಕುರಿತಂತೆ ಮುಖಂಡರ ಅಭಿಪ್ರಾಯ ಸಂಗ್ರಹ ಕಾರ್ಯ ಪೂರ್ಣಗೊಂಡಿದೆ.ಶುಕ್ರವಾರ ಅಥವಾ ಶನಿವಾರ ನೇಮಕದ ಆದೇಶ ಪ್ರಕಟಗೊಳ್ಳಬಹುದು ಎಂದು ಹೈಕಮಾಂಡ್‌ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

ಅಧ್ಯಕ್ಷ ಸ್ಥಾನಕ್ಕೆ ಶಿವಕುಮಾರ್ ಹಾಗೂ ಎಂ.ಬಿ. ಪಾಟೀಲ ಮಧ್ಯೆ ನೇರ ಪೈಪೋಟಿ ಏರ್ಪಟ್ಟಿದೆ. ಎಚ್.ಕೆ. ಪಾಟೀಲ ಹಾಗೂ ಕೆ.ಎಚ್. ಮುನಿಯಪ್ಪ ಕೂಡ ಆಕಾಂಕ್ಷಿಗಳಾಗಿದ್ದಾರೆ.

ADVERTISEMENT

ಹಿರಿಯ ಮುಖಂಡರ ಅಭಿಪ್ರಾಯ ಆಲಿಸಿರುವ ಪಕ್ಷದ ವರಿಷ್ಠರು ಈ ಕುರಿತ ವರದಿಯನ್ನೂ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ಸಲ್ಲಿಸಿದ್ದಾರೆ. ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಅವರು ಈ ಬಗ್ಗೆ ಸೋನಿಯಾ ಗಾಂಧಿ ಅವರೊಂದಿಗೆಗುರುವಾರ ಸಂಜೆ ಸಭೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.