ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಸಂಸದ ಡಿ.ಕೆ. ಸುರೇಶ ಗುರುವಾರ ಜಾರಿ ನಿರ್ದೇಶನಾಲಯ (ಇ.ಡಿ)ದ ವಿಚಾರಣೆ ಎದುರಿಸಿದರು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೆ ಒಳಗಾಗಿರುವ ಡಿ.ಕೆ.ಶಿವಕುಮಾರ್ ಅವರಿಗೆ ಸಂಬಂಧಿಸಿದ ವ್ಯವಹಾರಗಳ ಕುರಿತು ಹೇಳಿಕೆ ನೀಡಲು ವಿಚಾರಣೆಗೆ ಹಾಜರಾಗುವಂತೆ ಇ.ಡಿ ಸಮನ್ಸ್ ಜಾರಿ ಮಾಡಿತ್ತು.
ಇ.ಡಿ. ಕಚೇರಿಗೆ ಬೆಳಿಗ್ಗೆ 11ಕ್ಕೆ ತೆರಳಿದ ಸುರೇಶ್, ಸಂಜೆ 6.30ರವರೆಗೆ ವಿಚಾರಣೆ ಎದುರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.