ಬೆಂಗಳೂರು: ಜಲ ಸಂಪನ್ಮೂಲ ಇಲಾಖೆ ಸಚಿವ ಡಿ.ಕೆ. ಶಿವಕುಮಾರ್ ಬುಧವಾರ ಆದಾಯ ತೆರಿಗೆ ಇಲಾಖೆ (ಐ.ಟಿ) ಕಚೇರಿಗೆ ಭೇಟಿ ನೀಡಿ ಬೇನಾಮಿ ಆಸ್ತಿಗೆ ಸಂಬಂಧಿಸಿದಂತೆ ವಿವರಣೆ ನೀಡಿದ್ದಾರೆ.
ಸಚಿವರು ತಮ್ಮ ವಕೀಲರ ಜೊತೆ ಸುದೀರ್ಘವಾಗಿ ಸಮಾಲೋಚಿಸಿದ ಬಳಿಕ ಐ.ಟಿ ಕಚೇರಿಗೆ ತೆರಳಿ ವಿವರಣೆ ನೀಡಿದರು ಎಂದು ಮೂಲಗಳು ತಿಳಿಸಿವೆ.
ಸಚಿವರು ಹಾಗೂ ಅವರ ಕುಟುಂಬದ ಸದಸ್ಯರು ಹೊಂದಿದ್ದಾರೆ ಎನ್ನಲಾದ ಬೇನಾಮಿ ಆಸ್ತಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ತನಿಖೆ ನಡೆಸುತ್ತಿದೆ.
ಸಚಿವರ ತಾಯಿ ಗೌರಮ್ಮ ಅವರಿಗೆ ಈಚೆಗೆ ನೋಟಿಸ್ ನೀಡಿದ್ದ ಐ.ಟಿ. ಕೆಲವು ಆಕ್ಷೇಪಗಳನ್ನು ಎತ್ತಿತ್ತು. ಇವುಗಳಿಗೆ ಬುಧವಾರದ (ಮಾರ್ಚ್ 6) ಒಳಗೆ ಸೂಕ್ತ ವಿವರಣೆ ನೀಡುವಂತೆ ಕೇಳಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.