ADVERTISEMENT

ನವರಂಗಿ ನಕಲಿ ಸ್ವಾಮಿ ವಿರುದ್ಧ ರಾಜ್ಯಪಾಲರ ಕ್ರಮ ಏಕಿಲ್ಲ: ಡಿ.ಕೆ.ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2024, 11:49 IST
Last Updated 19 ಆಗಸ್ಟ್ 2024, 11:49 IST
<div class="paragraphs"><p>ಡಿ.ಕೆ.ಶಿವಕುಮಾರ್ (ಸಂಗ್ರಹ ಚಿತ್ರ)</p></div>

ಡಿ.ಕೆ.ಶಿವಕುಮಾರ್ (ಸಂಗ್ರಹ ಚಿತ್ರ)

   

(ಪ್ರಜಾವಾಣಿ ಚಿತ್ರ)

ಬೆಂಗಳೂರು: ಜೆಡಿಎಸ್‌ನ ಅಗ್ರಗಣ್ಯ ನಾಯಕ, ನವರಂಗಿ ನಕಲಿ ಸ್ವಾಮಿ, ಬರೀ ಬುರುಡೆ ಬಿಡುವ ಕುಮಾರಸ್ವಾಮಿ ವಿರುದ್ದ ಇಲ್ಲದ ಕ್ರಮ ನಮ್ಮ ವಿರುದ್ದವೇಕೆ ರಾಜ್ಯಪಾಲರೇ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗುಡುಗಿದರು.

ADVERTISEMENT

ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮುಂದಿನ 10 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುತ್ತದೆ. ನಿಮ್ಮ ಯಾವ ಹುನ್ನಾರಗಳಿಗೂ ನಮ್ಮ ಸರ್ಕಾರ ಜಗ್ಗುವುದಿಲ್ಲ, ಬಗ್ಗುವುದಿಲ್ಲ, ಹೆದರುವುದಿಲ್ಲ ಎಂದರು.

ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ಧನ ರೆಡ್ಡಿ ಅವರ ಮೇಲೂ ಲೋಕಾಯುಕ್ತ ಸಂಸ್ಥೆ ತನಿಖೆ ನಡೆಸಿ ಕಳಂಕಿತರ ವಿರುದ್ದ ವಿಚಾರಣೆಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದರೂ ಏಕೆ ಪುರಸ್ಕರಿಸಿಲ್ಲ ರಾಜ್ಯಪಾಲರೇ ಎಂದು ಪ್ರಶ್ನಿಸಿದರು.

‘ವಿರೋಧ ಪಕ್ಷದವರು ಹತ್ತು ಜನ್ಮ ಎತ್ತಿದರೂ ಕಾಂಗ್ರೆಸ್ ಸರ್ಕಾರ ಬೀಳಿಸಲು ಸಾಧ್ಯವಿಲ್ಲ. ಮುಖ್ಯಮಂತ್ರಿ ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಮಂತ್ರದಿಂದ ಮಾವಿನಕಾಯಿ ಉದುರಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರ ಪರವಾಗಿ ಡಿ.ಕೆ.ಶಿವಕುಮಾರ್ ಒಬ್ಬನೇ ಅಲ್ಲ ಇಂಡಿಯಾ ಒಕ್ಕೂಟ ಹಾಗೂ ರಾಜ್ಯದ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು, ಕಟ್ಟ ಕಡೆಯ ಮತದಾರರು ಆಶೀರ್ವಾದ ಮಾಡಿ ಬೆನ್ನಲುಬಾಗಿ ನಿಂತಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.