ಬೆಂಗಳೂರು: ನಿರುದ್ಯೋಗಿ ಪದವೀಧರರಿಗೆ ಮಾಸಿಕ ₹ 3,000 ಹಾಗೂ ಡಿಪ್ಲೊಮಾ ಪದವೀಧರರಿಗೆ ಮಾಸಿಕ ₹1,500 ಭತ್ಯೆ ನೀಡುವ ‘ಯುವನಿಧಿ’ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿ ಮಾಡಿದೆ.
* ಅಭ್ಯರ್ಥಿಗಳು https://sevasindhugs.karnataka.gov.in ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು.
* ಇದಲ್ಲದೇ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲೂ ನೋಂದಣಿ ಮಾಡಬಹುದು.
* ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಡಿಪ್ಲೊಮಾ ಪ್ರಮಾಣ ಪತ್ರ. ಆಧಾರ್ ಕಾರ್ಡ್, ಪಡಿತರ ಚೀಟಿ, ಅಭ್ಯರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ದಾಖಲೆಗಳು ಅಗತ್ಯ.
* ಬ್ಯಾಂಕ್ ಖಾತೆ ಸಕ್ರಿಯವಾಗಿರಬೇಕು.
* ಆಧಾರ್ ಸಂಖ್ಯೆ ಜೋಡಣೆ ಮೊಬೈಲ್ ಸಂಖ್ಯೆ ಜೋಡಣೆ ಎನ್‌ಸಿಪಿಐ ಮ್ಯಾಪಿಂಗ್ ಆಗಬೇಕು. ಇಲ್ಲದಿದ್ದರೆ ತಾಂತ್ರಿಕ ತೊಂದರೆಯಿಂದ ಭತ್ಯೆ ಜಮೆಯಾಗದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.