ADVERTISEMENT

ಬಿಜೆಪಿ ಪಕ್ಷಕ್ಕೆ ನಿಜಕ್ಕೂ ಮಹಿಳೆಯರ ಬಗ್ಗೆ ಗೌರವ ಇದೆಯೇ: ಕಾಂಗ್ರೆಸ್‌ ಪ್ರಶ್ನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಡಿಸೆಂಬರ್ 2023, 15:46 IST
Last Updated 18 ಡಿಸೆಂಬರ್ 2023, 15:46 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಬಿಜೆಪಿ ಪಕ್ಷಕ್ಕೆ ನಿಜಕ್ಕೂ ಮಹಿಳೆಯರ ಬಗ್ಗೆ ಗೌರವ, ಕಾಳಜಿ ಇದೆಯೇ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಕಾಂಗ್ರೆಸ್‌, ಬಿಜೆಪಿ ನಾಯಕರ ಮಹಿಳಾ ಪೀಡನೆಯ ಪ್ರಕರಣಗಳು ಒಂದೆರಡಲ್ಲ. ಬಿಜೆಪಿಗೆ ನಿಜಕ್ಕೂ ಮಹಿಳೆಯರ ಘನತೆಯ ಬಗ್ಗೆ ಕಾಳಜಿ ಇದ್ದಿದ್ದೇ ಆದರೆ, ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕೇಳಿಬಂದಿದ್ದ ಮೀಟೂ ಆರೋಪದ ಬಗ್ಗೆ ಬಿಜೆಪಿ ಮಾತಾಡಲಿಲ್ಲ ಏಕೆ ಎಂದು ಕಿಡಿಕಾರಿದೆ.

ಮುಂದುವರಿದು, ಸಂಸದ ಪ್ರತಾಪ ಸಿಂಹ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದಾಗ ಸಂಸದರ ಹೀನ ವರ್ತನೆಯನ್ನು ಖಂಡಿಸಲಿಲ್ಲವೇಕೆ?, ಮೈಸೂರಿನ ಬಿಜೆಪಿ ನಾಯಕ ರಾಮ್ ದಾಸ್ ಮಹಿಳೆಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಆರೋಪ ಕೇಳಿಬಂದಾಗ ಮೌನವಹಿಸಿದ್ದೇಕೆ? ಆರಗ ಜ್ಞಾನೇಂದ್ರ ಅತ್ಯಾಚಾರ ಸಂತ್ರಸ್ತೆಯ ಬಗ್ಗೆ ಕ್ಷುಲ್ಲಕವಾಗಿ ಮಾತಾಡಿದಾಗ ಬಾಯಿ ಮುಚ್ಚಿಕೊಂಡಿದ್ದೀಕೆ? ಎಂದು ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.