ಸೌದಿ ಅರೇಬಿಯಾದಿಂದ ಮಂಗಳೂರಿಗೆ ಬರುತ್ತಿದ್ದ ಸರಕು ಸಾಗಣೆ ಹಡಗಿನ ಮೇಲೆ ಡಿ.23ರಂದು ಡ್ರೋನ್ ದಾಳಿ ನಡೆದ ಬೆನ್ನಲ್ಲೇ, ಡಿ.24ರಂದು, ಕೆಂಪು ಸಮುದ್ರದಲ್ಲಿ ಸಾಗುತ್ತಿದ್ದ ಭಾರತದ ತೈಲ ಟ್ಯಾಂಕರ್ ಮೇಲೆ ಡ್ರೋನ್ ದಾಳಿ ನಡೆದಿದೆ. ಎರಡೂ ದಾಳಿಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹಡಗಿನ ಮೇಲೆ ದಾಳಿ ನಡೆಸಿರುವುದು ಇರಾನ್ ಎಂದು ಅಮೆರಿಕದ ರಕ್ಷಣಾ ಇಲಾಖೆ ಹೇಳಿದೆ. ಅದೇ ರೀತಿ, ಯೆಮನ್‌ನ ಹೌತಿ ಬಂಡುಕೋರರು ಭಾರತದ ತೈಲ ಟ್ಯಾಂಕರ್ ಮೇಲೆ ದಾಳಿ ನಡೆಸಿದ್ದಾರೆ ಎಂದೂ ಅಮೆರಿಕದ ರಕ್ಷಣಾ ಇಲಾಖೆ ಪೆಂಟಗನ್‌ನ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.