ಬೆಂಗಳೂರು: ‘ನಂದಿನಿ ಬಡಾವಣೆ ಹಾಗೂ ಸುತ್ತಮುತ್ತಲ ಸ್ಥಳಗಳಲ್ಲಿ ಮಾದಕ ವ್ಯಸನಿಗಳ ಸಂಖ್ಯೆ ಹೆಚ್ಚುತ್ತಿದೆ. ಬಹುಪಾಲು ಯುವಜನರು ದಾರಿ ತಪ್ಪುತ್ತಿದ್ದಾರೆ. ಕೆಲ ಶಾಲೆ ಹಾಗೂ ಕಾಲೇಜುಗಳ ವಿದ್ಯಾರ್ಥಿಗಳು ಸಹ ಡ್ರಗ್ಸ್ ಹಿಂದೆ ಬೀಳುತ್ತಿದ್ದಾರೆ’ ಎಂದು ನಂದಿನಿ ಬಡಾವಣೆ ನಿವಾಸಿಗಳು ಕಳವಳ ವ್ಯಕ್ತ ಪಡಿಸಿದರು.
ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರು ನಂದಿನಿ ಬಡಾವಣೆಯ ಪೊಲೀಸ್ ಠಾಣೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜನಸಂಪರ್ಕ ಸಭೆಯಲ್ಲಿ ಸಮಸ್ಯೆ ಹೇಳಿಕೊಂಡ ಸ್ಥಳೀಯ ನಿವಾಸಿಗಳು ಗಾಂಜಾ ಹಾವಳಿಯ ಬಗ್ಗೆ ಗಮನ ಸೆಳೆ ದರು. ಮಾದಕ ದ್ರವ್ಯಗಳ ಮಾರಾಟ ತಡೆಯಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
‘ಆಯಾ ದಿನದ ದುಡಿಮೆ ನಂಬಿ ಜೀವನ ನಡೆಸುವವರು ಹೆಚ್ಚಿದ್ದಾರೆ. ದಂಪತಿ ಕೆಲಸಕ್ಕೆ ಹೋದರೆ, ಮಕ್ಕಳು ಮನೆಯಲ್ಲೇ ಉಳಿಬೇಕಾಗುತ್ತದೆ. ಈ ಪೈಕಿ ಹಲವು ಮಕ್ಕಳು ಇಂದು ದುಶ್ಚಟ ಗಳಿಗೆ ದಾಸರಾಗುತ್ತಿದ್ದಾರೆ. ಮಾದಕ ವ್ಯಸನಿಗಳಾಗುತ್ತಿದ್ದಾರೆ’ ಎಂದೂ ಸ್ಥಳೀಯರು ದೂರಿದರು.
‘ಮಾದಕ ವಸ್ತು ಮಾರಾಟ ಮಾಡು ವವರನ್ನು ಪತ್ತೆ ಮಾಡಿ ಶಿಕ್ಷಿಸಬೇಕು. ಆಗಲೇ ಯುವಜನತೆಯನ್ನು ಸರಿದಾರಿಗೆ ತರಲು ಸಾಧ್ಯ’ ಎಂದೂ ಸಲಹೆ ನೀಡಿ ದರು.
ಕಮಲ್ ಪಂತ್, ‘ಮಾದಕ ವಸ್ತು ಸಾಗಣೆ ಹಾಗೂ ಮಾರಾಟದ ವಿರುದ್ಧ ನಿರಂತರವಾಗಿ ಕಾರ್ಯಾಚರಣೆ ನಡೆಸ ಲಾಗುತ್ತಿದೆ. ನಂದಿನಿ ಬಡಾವಣೆ ಹಾಗೂ ಸುತ್ತಮುತ್ತ ಮಾದಕ ವಸ್ತು ಮಾರಾಟ ಮಾಡುತ್ತಿರುವವರ ಪತ್ತೆಗೆ ಕ್ರಮ ಕೈಗೊಳ್ಳುವಂತೆ ಇನ್‌ಸ್ಪೆಕ್ಟರ್‌ಗೆ ಸೂಚಿಸುತ್ತೇನೆ’ ಎಂದು ಭರವಸೆ ನೀಡಿ ದರು.
ಚುಡಾಯಿಸಿದರೆ ಕಠಿಣ ಕ್ರಮ: ‘ಟೀ ಅಂಗಡಿ, ಬೇಕರಿ ಹಾಗೂ ರಸ್ತೆ ಬದಿಯಲ್ಲಿ ಕೆಲ ಕಿಡಿಗೇಡಿಗಳು, ಯುವತಿಯರನ್ನು ಚುಡಾಯಿಸುತ್ತಿದ್ದಾರೆ. ಯುವತಿಯರು ಭಯದಲ್ಲಿ ಓಡಾಡಬೇಕಾದ ಸ್ಥಿತಿ ಇದೆ. ಈ ಬಗ್ಗೆ ಕ್ರಮ ಕೈಗೊಳ್ಳಿ’ ಎಂದು
ಸ್ಥಳೀಯರೊಬ್ಬರು ವಿಡಿಯೊ ಸಾಕ್ಷ್ಯ ಸಮೇತ ದೂರು ಹೇಳಿದರು.
ಕಮಲ್ ಪಂತ್, ‘ಯುವತಿಯರನ್ನು ಚುಡಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಂಥ ಘಟನೆ ಗಳು ನಡೆದ ತಕ್ಷಣವೇ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಬೇಕು. ಅಗತ್ಯವಿರುವ ಕಡೆ ಪೊಲೀಸರ ಗಸ್ತು ಹೆಚ್ಚಿಸಲಾಗುವುದು’ ಎಂದರು.
ಅಡ್ಡಾದಿಡ್ಡಿ ವಾಹನ ನಿಲುಗಡೆ: ‘ಕೆಲವರು ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ನಿಲ್ಲಿಸುತ್ತಿದ್ದಾರೆ. ಇತರೆ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ’ ಎಂದು ಸಾರ್ವಜನಿಕರೊಬ್ಬರು ದೂರಿ ದರು.
ಕಮಲ್ ಪಂತ್, ‘ಅಡ್ಡಾದಿಡ್ಡಿ ವಾಹನ ನಿಲ್ಲಿಸುವವರಿಗೆ ಎಚ್ಚರಿಕೆ ನೀಡ ಲಾಗುವುದು. ತಪ್ಪು ತಿದ್ದಿಕೊಳ್ಳದಿ
ದ್ದರೆ ಕಾನೂನು ಕ್ರಮ ಜರುಗಿಸಲಾಗುವುದು’ ಎಂದರು. ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರಕುಮಾರ್ ಮೀನಾ ಸಭೆಯಲ್ಲಿ ಭಾಗವಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.