ಬೆಂಗಳೂರಿನ ತ್ಯಾಜ್ಯ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು, ಕೋಲಾರ, ಚಿಕ್ಕಬಳ್ಳಾಪುರದಂತಹ ಬರಪೀಡಿತ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ವ್ಯವಸ್ಥೆ ಕಲ್ಪಿಸಬೇಕು ಎಂಬ ಉದ್ದೇಶದಿಂದ ರೂಪಿತವಾದ ಕೋರಮಂಗಲ-ಚಳ್ಳಘಟ್ಟ (ಕೆಸಿ) ವ್ಯಾಲಿ ಮತ್ತು ಹೆಬ್ಬಾಳ-ನಾಗವಾರ (ಎಚ್‌ಎನ್) ವ್ಯಾಲಿ ಯೋಜನೆಯ ಅಸಮರ್ಪಕ ಅನುಷ್ಠಾನದ ಪರಿಣಾಮ ಜನ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆರೋಗ್ಯ ಮತ್ತು ಕೃಷಿ ಬದುಕಿನ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ ಎಂದು ಆರೋಪಿಸುತ್ತಿರುವ ಇಲ್ಲಿನ ಜನ, ತ್ಯಾಜ್ಯ ನೀರನ್ನು ಮೂರನೇ ಹಂತದಲ್ಲಿ ಸಂಸ್ಕರಿಸಿ ಕೊಡಬೇಕು ಎಂಬ ಬೇಡಿಕೆ ಇಡುತ್ತಾರೆ. ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ಯೋಜನೆಯ ಸದ್ಯದ ಸ್ಥಿತಿಗತಿ ಹೇಗಿದೆ ಎಂಬುದರ ಗ್ರೌಂಡ್ ರಿಪೋರ್ಟ್ ಇದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.