ಬೆಂಗಳೂರು: ಇ–ಶ್ರಮ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡಿರುವ ಎಲ್ಲ ಕಾರ್ಮಿಕರಿಗೆ ಬಿಪಿಎಲ್ (ಆದ್ಯತಾ ಪಡಿತರ ಚೀಟಿ) ಚೀಟಿ ವಿತರಣೆ ಕಾರ್ಯಕ್ಕೆ ಆಹಾರ ಇಲಾಖೆ ಚಾಲನೆ ನೀಡಿದೆ.
ಇ–ಶ್ರಮದಲ್ಲಿ ನೋಂದಾಯಿತ ಕಾರ್ಮಿಕರಿಗೆ ಬಿಪಿಎಲ್ ಚೀಟಿ ವಿತರಣೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿತ್ತು. ಈ ಪ್ರಕಾರ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಈ ಕಾರ್ಯವನ್ನು ಆರಂಭಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.
ಅರ್ಹ ಮತ್ತು ಇ–ಶ್ರಮದಲ್ಲಿ ನೋಂದಾಯಿಸಿಕೊಂಡಿರುವ ಕಾರ್ಮಿಕರು ತಮ್ಮ ಹತ್ತಿರದ ಆಹಾರ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಇಲಾಖೆ ಸೂಚಿಸಿದೆ.
ಹೆಚ್ಚಿನ ಮಾಹಿತಿಗೆ ಶುಲ್ಕ ರಹಿತ ದೂರವಾಣಿ ಸಂಖ್ಯೆ:1800-425-9339 ಅಥವಾ ಇಲಾಖೆಯ ಸಹಾಯವಾಣಿ 1967ಕ್ಕೆ, ಕೆಲಸದ ದಿನಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರ ಒಳಗೆ ಕರೆ ಮಾಡಬಹುದು ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.