ADVERTISEMENT

ಶಾಸಕ ಸ್ಥಾನಕ್ಕೆ ತುಕಾರಾಂ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2024, 16:17 IST
Last Updated 14 ಜೂನ್ 2024, 16:17 IST
   

ಬೆಂಗಳೂರು: ಸಂಡೂರು ವಿಧಾನಸಭಾ ಕ್ಷೇತ್ರದಿಂದ 2023ರಲ್ಲಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದ ಇ. ತುಕಾರಾಂ ತಮ್ಮ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಸಂಸದರಾಗಿ ಆಯ್ಕೆಯಾಗಿದ್ದರು. ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಎರಡು ದಿನದಲ್ಲಿ ಬೊಮ್ಮಾಯಿ ರಾಜೀನಾಮೆ :

ADVERTISEMENT

ಹಾವೇರಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಅವರು ಶಾಸಕ ಸ್ಥಾನಕ್ಕೆ (ಶಿಗ್ಗಾವಿ ವಿಧಾಸನಭಾ ಕ್ಷೇತ್ರ) ಒಂದೆರಡು ದಿನಗಳಲ್ಲಿ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.