ADVERTISEMENT

ಬಳ್ಳಾರಿ ಕಾಂಗ್ರೆಸ್ ಶಾಸಕ ನಾರಾ ಭರತ್‌ ರೆಡ್ಡಿ ಮನೆ, ಕಚೇರಿ ಮೇಲೆ ಇ.ಡಿ ದಾಳಿ

ಶಾಸಕ ಭರತ್‌ ರೆಡ್ಡಿ ಅವರ ಕುಟುಂಬ ಗ್ರಾನೈಟ್‌ ಉದ್ಯಮದಲ್ಲಿ ತೊಡಗಿಸಿಕೊಂಡಿದೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2024, 4:35 IST
Last Updated 10 ಫೆಬ್ರುವರಿ 2024, 4:35 IST
<div class="paragraphs"><p>ನಾರಾ ಭರತ್‌ ರೆಡ್ಡಿ</p></div>

ನಾರಾ ಭರತ್‌ ರೆಡ್ಡಿ

   

ಬಳ್ಳಾರಿ: ಬಳ್ಳಾರಿ ನಗರ ಕಾಂಗ್ರೆಸ್‌ ಶಾಸಕ ನಾರಾ ಭರತ್‌ ರೆಡ್ಡಿ ಮನೆ, ಕಚೇರಿಗಳ ಮೇಲೆ ಶನಿವಾರ ಮುಂಜಾನೆ ಜಾರಿ ನಿರ್ದೇಶನಾಲಯ (ಇ.ಡಿ)ದ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಇದರ ಜತೆಗೇ, ಭರತ್‌ ರೆಡ್ಡಿ ಅವರ ತಂದೆ, ಮಾಜಿ ಶಾಸಕ ಸೂರ್ಯನಾರಾಯಣ ರೆಡ್ಡಿ, ಚಿಕ್ಕಪ್ಪ ಪ್ರತಾಪ ರೆಡ್ಡಿ ಮತ್ತು ಸಂಬಂಧಿಗಳ ಮನೆಗಳು, ಕಚೇರಿಗಳಲ್ಲೂ ಶೋಧ ನಡೆಯುತ್ತಿದೆ. ಬೆಂಗಳೂರು, ಚೆನ್ನೈನಲ್ಲಿರುವ ಕಚೇರಿಗಳ ಮೇಲೂ ದಾಳಿ ನಡೆದಿದೆ ಎಂದು ಹೇಳಲಾಗಿದೆ.

ADVERTISEMENT

ಶಾಸಕ ಭರತ್‌ ರೆಡ್ಡಿ ಅವರ ಕುಟುಂಬ ಗ್ರಾನೈಟ್‌ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದು, ಕೊಪ್ಪಳ ಜಿಲ್ಲೆಯ ಕುಕನೂರು, ಆಂಧ್ರ ಪ್ರದೇಶದ ಒಂಗೋಲ್‌ಗಳಲ್ಲಿ ಕ್ವಾರಿಗಳನ್ನು ಹೊಂದಿದೆ.

ಇ.ಡಿ ಅಧಿಕಾರಿಗಳ ತಂಡ ಬೆಂಗಳೂರಿನಿಂದ ಆಗಮಿಸಿದ್ದು, ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡದೆ ದಾಳಿ ನಡೆಸಿದೆ ಎಂದು ಗೊತ್ತಾಗಿದೆ.

ಕೆಲ ವರ್ಷಗಳ ಹಿಂದೆ ಭರತ್‌ ರೆಡ್ಡಿ ಅವರ ಮನೆ, ಕಚೇರಿ ಮೇಲೆ ಐ.ಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇತ್ತೀಚೆಗೆ ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅವರು ಉಚಿತ ಕುಕ್ಕರ್‌ಗಳನ್ನು ಹಂಚಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.